Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:5 - ಕನ್ನಡ ಸಮಕಾಲಿಕ ಅನುವಾದ

5 ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿ ಹಾಗೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿ ಮಾಡುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿಯೂ ಮಾಡುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “‘ನಾನು ರಬ್ಬಾ ನಗರವನ್ನು ಒಂಟೆಗಳು ಮೇಯುವ ಸ್ಥಳವನ್ನಾಗಿಯೂ, ಅಮ್ಮೋನ್ ದೇಶವನ್ನು ಕುರಿಹಟ್ಟಿಯನ್ನಾಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:5
18 ತಿಳಿವುಗಳ ಹೋಲಿಕೆ  

ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.


ಯೋವಾಬನು ಅಮ್ಮೋನಿಯರ ರಬ್ಬತಿನ ಮೇಲೆ ಯುದ್ಧಮಾಡಿ, ಅರಮನೆ ಇದ್ದ ಪಟ್ಟಣವನ್ನು ವಶಪಡಿಸಿಕೊಂಡನು.


ಅರೋಯೇರ್ ಪ್ರಾಂತದ ಪಟ್ಟಣಗಳು ನಿರ್ಜನವಾಗಿ, ಅವು ಯಾರ ಹೆದರಿಕೆಯೂ ಇಲ್ಲದೆ ಮಲಗುವ ಮಂದೆಗಳಿಗೆ ಸ್ಥಳವಾಗುವುವು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’


ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.


ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಯೆಹೋವ ದೇವರೆಂದು ತಿಳಿಯುವುದು.


ಮತ್ತು ಪ್ರಧಾನ ಭೂಮಿಯಲ್ಲಿರುವ ಅದರ ಪುತ್ರಿಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವ ದೇವರೆಂದು ಎಲ್ಲರಿಗೂ ತಿಳಿಯುವುದು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.


ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವು ಮಾಡುವಿರಿ. ಈ ರೀತಿ ಆದಾಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ತಿಳಿಯುವಿರಿ.’


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.


ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ಖಡ್ಗವನ್ನು ಒರೆಗೆ ಸೇರಿಸು, ನೀನು ಸೃಷ್ಟಿಯಾದ ಸ್ಥಳದಲ್ಲಿಯೇ ನಿನ್ನ ಪೂರ್ವಜರ ನಾಡಿನಲ್ಲಿಯೇ ನಿನಗೆ ನ್ಯಾಯತೀರಿಸುವೆನು.


“ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.


ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆಗಳಾಗಿಯೂ ಕುರಿಹಟ್ಟಿಗಳಾಗಿಯೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು