ಯೆಹೆಜ್ಕೇಲನು 25:7 - ಕನ್ನಡ ಸಮಕಾಲಿಕ ಅನುವಾದ7 ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಇತರ ಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಾಂಗಗಳೊಳಗಿಂದ ನಿಮ್ಮನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನ ಹೆಸರನ್ನು ಅಳಿಸಿಬಿಡುವೆನು. ನಾನು ನಿಮ್ಮನ್ನು ನಾಶಮಾಡುವೆನು. ಆಗ ನಾನೇ ಯೆಹೋವ ದೇವರೆಂದು ತಿಳಿಯುವಿರಿ.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸೂರೆಗಾಗಿ ಮ್ಲೇಚ್ಫರಿಗೆ ವಶಪಡಿಸಿ ಜನಾಂಗಗಳೊಳಗಿಂದ ಕಿತ್ತುಬಿಟ್ಟು ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.’” ಅಧ್ಯಾಯವನ್ನು ನೋಡಿ |