Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:1 - ಕನ್ನಡ ಸಮಕಾಲಿಕ ಅನುವಾದ

1 ಹನ್ನೊಂದನೆಯ ವರ್ಷ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹನ್ನೊಂದನೆಯ ವರ್ಷದ ಒಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಹನ್ನೊಂದನೆಯ ವರುಷದ [ಒಂದಾನೊಂದು] ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇಶ ಭ್ರಷ್ಟರಾಗಿದ್ದ ಹನ್ನೊಂದನೇ ವರ್ಷದ ತಿಂಗಳ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:1
14 ತಿಳಿವುಗಳ ಹೋಲಿಕೆ  

ಏಳನೆಯ ವರ್ಷದ, ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವ ದೇವರ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತುಕೊಂಡರು.


ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು.


ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಕೀನನ ಸೆರೆಯ ಐದನೆಯ ವರ್ಷದಲ್ಲಿ,


ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು.


ನಾನು ದೊಡ್ಡ ಪ್ರತಿದಂಡನೆಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ಮುಯ್ಯಿತೀರಿಸುವೆನು. ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’


ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ಇಪ್ಪತ್ತೇಳನೆಯ ವರ್ಷದಲ್ಲಿ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ಇದಲ್ಲದೆ ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ, ಏಳನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ,


ಎಫ್ರಾಯೀಮ್ ಟೈರ್‌ನಂತಹ ಸುಂದರವಾದ ಸ್ಥಳದಲ್ಲಿ ನೆಡುವುದನ್ನು ನಾನು ಕಂಡೆನು. ಆದರೆ ಎಫ್ರಾಯೀಮ್ ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.”


ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಿನ್ನ ನಾವಿಕರೂ ನಿನ್ನ ಅಂಬಿಗರೂ ನಿನ್ನ ಒಡಕುಗಳನ್ನು ಮುಚ್ಚುವವರೂ ನಿನ್ನ ವ್ಯಾಪಾರಿಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು