ಯೆಹೆಜ್ಕೇಲನು 26:16 - ಕನ್ನಡ ಸಮಕಾಲಿಕ ಅನುವಾದ16 ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಸಮುದ್ರದ ಸುತ್ತುಮುತ್ತಲಿನ ಸಕಲಪ್ರಭುಗಳು ತಮ್ಮ ಸಿಂಹಾಸನಗಳಿಂದಿಳಿದು ನಿಲುವಂಗಿಗಳನ್ನು ತೆಗೆದುಹಾಕಿ ಬೂಟೇದಾರಿಯ ವಸ್ತ್ರಗಳನ್ನು ಕಿತ್ತೆಸೆದು ತತ್ತರವನ್ನೇ ಹೊದ್ದುಕೊಂಡು ನೆಲದ ಮೇಲೆ ಕುಕ್ಕರಿಸಿ ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿ ಬೆರಗಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಬೇಗನೇ ನಾಶವಾದೆ ಎಂದು ಕೇಳಿ ದಂಗುಬಡಿದಂತಾಗುವರು. ಅಧ್ಯಾಯವನ್ನು ನೋಡಿ |