Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:3 - ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಟೈರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವುದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಟೈರೇ, ಇಗೋ ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ವಿರುದ್ಧ ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತಾನೆ - ಇಗೋ, ತೂರೇ, ನಿನಗೆ ವಿರುದ್ಧನಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ತೂರೇ, ನಾನು ನಿನಗೆ ಮ್ಯುಯಿತೀರಿಸುವೆನು. ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅನೇಕ ರಾಜ್ಯಗಳನ್ನು ಎಬ್ಬಿಸುತ್ತೇನೆ. ಅವರು ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿನಗೆ ವಿರುದ್ಧವಾಗಿ ಬರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:3
23 ತಿಳಿವುಗಳ ಹೋಲಿಕೆ  

ಸಮುದ್ರವೇ ಬಾಬಿಲೋನಿನ ಮೇಲೆ ನುಗ್ಗಿಬಿಟ್ಟಿದೆ, ಲೆಕ್ಕವಿಲ್ಲದೆ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.


ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ.


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಸೂಚನೆಗಳು ಕಾಣಿಸಿಕೊಳ್ಳುವುವು. ಭೂಮಿಯಲ್ಲಾದರೋ, ಮೊರೆಯುವ ತೆರೆಗಳ ಮತ್ತು ಭೋರ್ಗರೆಯುವ ಸಮುದ್ರದ ನಿಮಿತ್ತ ಜನಾಂಗಗಳು ದಿಕ್ಕುತೋಚದೆ ಸಂಕಟಕ್ಕೆ ಒಳಗಾಗುವರು.


ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು.


ಸಿಂಹವು, ತನ್ನ ಮರಿಗಳಿಗೆ, ಸಿಂಹಿಣಿಗಳಿಗೆ, ಕೊರಳು ಹಿಸುಕಿ ಕೊಂದ ಪ್ರಾಣಿಗಳಿಂದ ತನ್ನ ಗುಹೆಯನ್ನು ತುಂಬಿಸುತ್ತಿತ್ತು.


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರೋಷ್, ಮೆಷೆಕ್, ತೂಬಲಿಗೆ ಮುಖ್ಯ ರಾಜಕುಮಾರನಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.


ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.


ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ. ಪೂರ್ವದಿಕ್ಕಿನ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.


‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.


ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.


“ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಸೈನ್ಯಗಳ ದೇವರಾದ ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ದಿವಸವೂ, ನಿನ್ನ ಶಿಕ್ಷೆಯ ಕಾಲವೂ ಬಂತು.


ಇಗೋ, ತಗ್ಗಿನ ನಗರಿಯೇ, ಬಯಲಿನ ಬಂಡೆಯಲ್ಲಿ ವಾಸಮಾಡುವವರೇ, “ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರುವರೆಂದು, ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ; ಅವರು ಕ್ರೂರರು; ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಓ ಚೀಯೋನಿನ ಪುತ್ರಿಯೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.”


ದೇವರು ಆಜ್ಞಾಪಿಸಿ ಬಿರುಗಾಳಿಯನ್ನು ಎಬ್ಬಿಸಿದರು; ಅದು ಅದರ ತೆರೆಗಳನ್ನು ಎಬ್ಬಿಸಿತು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು.


ಆದ್ದರಿಂದ ಇಗೋ, ನಾನು ನಿನಗೂ ನಿನ್ನ ನದಿಗಳಿಗೂ ವಿರುದ್ಧವಾಗಿದ್ದೇನೆ. ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.


ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲಿಂದ ಎತ್ತಿ, ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ, ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.


ಯೆಹೋವ ದೇವರು ಅದರ ಆಸ್ತಿಪಾಸ್ತಿಯನ್ನು ಕಿತ್ತುಹಾಕುವರು. ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಅದು ಬೆಂಕಿಯಿಂದ ದಹಿಸಿಬಿಡುವುದು.


ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು