Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:9 - ಕನ್ನಡ ಸಮಕಾಲಿಕ ಅನುವಾದ

9 ತನ್ನ ಯುದ್ಧ ಯಂತ್ರಗಳನ್ನು ನಿನ್ನ ಗೋಡೆಗಳಿಗೆ ತಾಕಿಸುವನು. ತನ್ನ ಆಯುಧಗಳಿಂದ ನಿನ್ನ ಗೋಪುರಗಳನ್ನು ಕೆಡವಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಗುರಾಣಿ ಹಿಡಿದಿರುವವರನ್ನು ಕಳುಹಿಸಿ, ತನ್ನ ಯುದ್ಧ ಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೋಟೆ ಕೊತ್ತಲಗಳನ್ನು ಒಡೆದು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತನ್ನ ಭಿತ್ತಿಭೇದಕಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೊತ್ತಲಗಳನ್ನು ಒಡೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಗುರಾಣಿಯೆತ್ತಿರುವವರನ್ನು ಕಳುಹಿಸಿ ತನ್ನ ಭಿತ್ತಿಭೇದಕಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ ತನ್ನ ಆಯುಧಗಳಿಂದ ನಿನ್ನ ಕೊತ್ತಲಗಳನ್ನು ಒಡೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವನು ಮರದ ತೊಲೆಗಳನ್ನು ತಂದು ನಿನ್ನ ಗೋಡೆಗಳನ್ನು ಕೆಡವಿಬಿಡುವನು. ಗುದ್ದಲಿಗಳಿಂದ ನಿನ್ನ ಬುರುಜುಗಳನ್ನು ಕೆಡವಿಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:9
5 ತಿಳಿವುಗಳ ಹೋಲಿಕೆ  

ಇದಲ್ಲದೆ ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ, ಮಣ್ಣುದಿಬ್ಬಗಳ ಮೇಲೆಯೂ ಇರಲು, ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದ್ದರಿಂದ ಅವನ ಹೆಸರು ಬಹಳ ದೂರದವರೆಗೆ ಪ್ರಸಿದ್ಧಿಯಾಯಿತು. ಬಹು ಬಲಿಷ್ಠನಾಗುವ ಪರ್ಯಂತರ ಅವನು ಬಹು ಆಶ್ಚರ್ಯಕರವಾಗಿ ಸಹಾಯ ಪಡೆಯುತ್ತಿದ್ದನು.


ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.


ಅವರು ಟೈರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ಧೂಳನ್ನು ಒರಸಿ ಅದನ್ನು ಬೋಳು ಬಂಡೆಯಂತೆ ಮಾಡುವೆನು.


ಅವನು ಪ್ರಧಾನ ಭೂಮಿಯಲ್ಲಿನ ನಿನ್ನ ಪುತ್ರಿಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಗುರಾಣಿಯನ್ನು ಎತ್ತುವನು.


ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಸುಕುವದು, ಒಡಕು ಬಿದ್ದ ಕೋಟೆಯೊಳಗೆ ಶತ್ರುಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲುಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು