Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:10 - ಕನ್ನಡ ಸಮಕಾಲಿಕ ಅನುವಾದ

10 “ ‘ಪಾರಸಿಯರೂ ಲೂದ್ಯರೂ ಹಾಗೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನೂ ಶಿರಸ್ತ್ರಾಣವನ್ನೂ ನಿನ್ನ ಗೋಡೆಯಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಪಾರಸಿಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯದ ಭಟರಾಗಿದ್ದರು. ಖೇಡ್ಯ ಶಿರಸ್ತ್ರಾಣಗಳನ್ನು ನಿನ್ನಲ್ಲಿ ನೇತುಹಾಕಿ ನಿನ್ನನ್ನು ಭೂಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪಾರಸಿಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯದ ಭಟರಾಗಿ ಖೇಡ್ಯಶಿರಸ್ತ್ರಾಣಗಳನ್ನು ನಿನ್ನಲ್ಲಿ ನೇತು ಹಾಕಿ ನಿನ್ನನ್ನು ಭೂಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “‘ಪರ್ಶಿಯ, ಲೂದ್ ಮತ್ತು ಪೂಟ್‌ನ ಜನರು ನಿನ್ನ ಸೈನ್ಯದಲ್ಲಿರುವರು. ಅವರು ಯುದ್ಧವೀರರು. ಅವರು ನಿನ್ನ ಗೋಡೆಗಳಲ್ಲಿ ತಮ್ಮ ಗುರಾಣಿ ಮತ್ತು ಶಿರಸ್ತ್ರಾಣಗಳನ್ನು ತೂಗು ಹಾಕಿದರು. ನಿನ್ನ ನಗರಕ್ಕೆ ಘನತೆಯನ್ನು ಅವರು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:10
15 ತಿಳಿವುಗಳ ಹೋಲಿಕೆ  

ಅವರೊಂದಿಗೆ ಪಾರಸಿಯರೂ ಕೂಷ್ಯರೂ ಮತ್ತು ಪೂಟ್ಯರೂ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.


ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು.


ಕುದುರೆಗಳೇ ಬನ್ನಿರಿ; ಸಾರಥಿಗಳೇ ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ, ಪೂಟ್ಯರೂ, ಬಿಲ್ಲನ್ನು ಹಿಡಿದು ಬಗ್ಗಿಸುವ ಲೂದ್ಯರೂ ಹೊರಗೆ ಬರಲಿ.


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ನಿನ್ನ ಕೊರಳು ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲಾದ ಬುರುಜಿನ ಹಾಗೆ ಇದೆ. ಅದರಲ್ಲಿ ಶೂರರ ಸಾವಿರ ಗುರಾಣಿಗಳು ತೂಗುಹಾಕಿ ಇವೆ.


ಕೂಷ್ ಮತ್ತು ಈಜಿಪ್ಟ್ ಅವಳ ಅಪಾರ ಬಲವಾಗಿದ್ದವು. ಪೂಟರೂ, ಲಿಬಿಯದವರೂ ಅವಳ ಸಹಾಯಕರಾಗಿದ್ದರು.


“ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.


ಅರ್ವಾದಿನವರು ಮತ್ತು ಹೆಲೆಕರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಇದ್ದರು. ಗಮ್ಮಾದ್ಯರು ನಿನ್ನ ಗೋಪುರಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.


ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್, ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.


ಈಜಿಪ್ಟನವರಿಂದ, ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು,


ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.


ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.


ಈಜಿಪ್ಟನವರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು


ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.


ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: “ ‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, ಸಮುದ್ರದ ಮೇಲೆ ಬಲಗೊಂಡ ನಗರವೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು