Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:13 - ಕನ್ನಡ ಸಮಕಾಲಿಕ ಅನುವಾದ

13 “ ‘ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ನರಪ್ರಾಣಿಗಳನ್ನೂ ಕಂಚಿನ ಪಾತ್ರೆಗಳನ್ನೂ ನಿನ್ನ ಬಜಾರಿನಲ್ಲಿ ಮಾರಾಟಕ್ಕಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯಾವಾನಿನವರು, ತೂಬಲಿನವರು ಮತ್ತು ಮೆಷೆಕಿನವರು ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನು ಹಾಗು ತಾಮ್ರದ ಪಾತ್ರೆಗಳನ್ನು ನಿನಗೆ ಸರಬರಾಜು ಮಾಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯಾವಾನಿನವರೂ ತೂಬಲಿನವರೂ ಮೆಷೆಕಿನವರೂ ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನೂ ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಯಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗ್ರೀಸ್, ತುರ್ಕಿ ಮತ್ತು ಕಪ್ಪು ಸಮುದ್ರದ ಸುತ್ತಲಿರುವ ದೇಶಗಳವರು ನಿನ್ನಲ್ಲಿಗೆ ವ್ಯಾಪಾರಕ್ಕಾಗಿ ಬಂದರು. ಅವರು ನಿನ್ನ ವಸ್ತುಗಳಿಗೆ ಬದಲಾಗಿ ಗುಲಾಮರನ್ನೂ ತಾಮ್ರವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:13
17 ತಿಳಿವುಗಳ ಹೋಲಿಕೆ  

ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್ ತೂಬಲ್, ಮೆಷೆಕ್ ಮತ್ತು ತೀರಾಸ್.


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


“ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ.


ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.


ನನ್ನ ಜನರಿಗೋಸ್ಕರ ಚೀಟುಹಾಕಿ, ಬಾಲಕರನ್ನು ವೇಶ್ಯಾ ವೃತ್ತಿಗೆ ಕೊಟ್ಟು, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕಾಗಿ ಮಾರಿದ್ದಾರೆ.


“ಅಲ್ಲಿ ಮೆಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ. ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಸುನ್ನತಿಯಿಲ್ಲದೆ ಖಡ್ಗದಿಂದ ಹತರಾದವರು.


ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು.


ಅವನು, “ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ. ಈಗ ನಾನು ಪಾರಸಿಯದ ರಾಜಪುತ್ರನ ಸಂಗಡ ಯುದ್ಧಮಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ, ಗ್ರೀಕಿನ ರಾಜಕುಮಾರನು ಬರುವನು.


ಆ ಒರಟು ಹೋತವು ಗ್ರೀಕಿನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.


ವೆದಾನ್ ಮತ್ತು ಯಾವಾನ್ ಊರುಗಳು ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ, ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಬಜಾರಿನಲ್ಲಿ ಇದ್ದವು.


ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.


ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.


ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ.


“ ‘ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.


ಯೆಹೂದದ ಹಾಗೂ ಯೆರೂಸಲೇಮಿನ ಜನರನ್ನು ಅವರ ಪ್ರಾಂತಗಳಿಂದ ದೂರ ಮಾಡುವುದಕ್ಕಾಗಿ ಗ್ರೀಕರಿಗೆ ಮಾರಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು