Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:18 - ಕನ್ನಡ ಸಮಕಾಲಿಕ ಅನುವಾದ

18 “ ‘ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದದರಿಂದಲೂ ಅಪರಿವಿುತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ ಹೆಲ್ಬೋನಿನ ದ್ರಾಕ್ಷಾರಸವನ್ನೂ ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದಮಸ್ಕವೂ ನಿನ್ನ ಒಳ್ಳೆಯ ಗಿರಾಕಿಯಾಗಿತ್ತು. ನೀನು ಸಂಪಾದಿಸಿಕೊಂಡಿದ್ದ ಅನೇಕ ಒಳ್ಳೆಯ ವಸ್ತುಗಳಿಗಾಗಿ ಅವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ಹೆಲ್ಬೋನಿನ ದ್ರಾಕ್ಷಾರಸವನ್ನು ಮತ್ತು ಉಣ್ಣೆಯನ್ನು ಆ ವಸ್ತುಗಳಿಗಾಗಿ ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:18
9 ತಿಳಿವುಗಳ ಹೋಲಿಕೆ  

ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು.


ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು.


ಅದಕ್ಕೆ ಅಬ್ರಾಮನು, “ಸಾರ್ವಭೌಮ ಯೆಹೋವ ದೇವರೇ, ಮಕ್ಕಳಿಲ್ಲದವನಾಗಿರುವ ನನಗೆ ಏನು ಕೊಡುವಿರಿ? ಈ ದಮಸ್ಕದ ಎಲೀಯೆಜೆರನಿಗೆ ನನ್ನ ಆಸ್ತಿ ಪಾಲಾಗಿಬಿಡುವುದು,” ಎಂದನು.


ಅಬ್ರಾಮನು ರಾತ್ರಿಯಲ್ಲಿ ಅವರಿಗೆ ವಿರೋಧವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ, ಅವರನ್ನು ಹೊಡೆದು, ದಮಸ್ಕದ ಉತ್ತರದಲ್ಲಿ ಹೋಬಾದವರೆಗೆ ಅವರನ್ನು ಸೋಲಿಸಿದನು.


ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.


ವೆದಾನ್ ಮತ್ತು ಯಾವಾನ್ ಊರುಗಳು ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ, ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಬಜಾರಿನಲ್ಲಿ ಇದ್ದವು.


ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ. ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು