Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:19 - ಕನ್ನಡ ಸಮಕಾಲಿಕ ಅನುವಾದ

19 ವೆದಾನ್ ಮತ್ತು ಯಾವಾನ್ ಊರುಗಳು ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ, ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಬಜಾರಿನಲ್ಲಿ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು.ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ವೆದಾನಿನವರೂ, ಯಾವಾನಿನವರೂ ಉಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸುತ್ತಿದ್ದರು. ಉಕ್ಕು, ಬಜೆ, ಲವಂಗ, ಚಕ್ಕೆಗಳು ನಿನಗೆ ಆಮದಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ವೆದಾನಿನವರೂ ಯಾವಾನಿನವರೂ ಊಜಾಲಿನಿಂದ ನಾನಾ ಸನುಗುಗಳನ್ನು ತಂದು ನಿನಗೆ ಒಪ್ಪಿಸಿದರು. ಉಕ್ಕುಬಜೆಲವಂಗಚಕ್ಕೆಗಳು ನಿನಗೆ ಆಮದಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಲ್ಲದೆ ಊಜಾಲಿನ ದ್ರಾಕ್ಷಾರಸವನ್ನು, ಉಕ್ಕನ್ನು, ದಾಲ್ಚಿನ್ನಿ ಮತ್ತು ಕಬ್ಬನ್ನು ಆ ವಸ್ತುಗಳಿಗಾಗಿ ವ್ಯಾಪಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:19
9 ತಿಳಿವುಗಳ ಹೋಲಿಕೆ  

ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ ಅಗರೂ ಚಂದನ ಇವುಗಳ ಸುವಾಸನೆ ಬೀರುತ್ತದೆ. ದಂತದ ಅರಮನೆಯೊಳಗಿಂದ ಉನ್ನತ ವಾದ್ಯಗಳು ನಿಮ್ಮನ್ನು ಆನಂದಗೊಳಿಸುವುದು.


ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರಿತ್ತು. ಈಗ ದಾನ್ಯರು ಆ ಪಟ್ಟಣಕ್ಕೆ ಇಸ್ರಾಯೇಲನಿಗೆ ಹುಟ್ಟಿದ ತಮ್ಮ ಮೂಲಪುರುಷನಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.


“ ‘ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.


“ ‘ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ನರಪ್ರಾಣಿಗಳನ್ನೂ ಕಂಚಿನ ಪಾತ್ರೆಗಳನ್ನೂ ನಿನ್ನ ಬಜಾರಿನಲ್ಲಿ ಮಾರಾಟಕ್ಕಿಟ್ಟರು.


“ ‘ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು.


“ ‘ದೆದಾನ್ ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.


ರಕ್ತಬೋಳ, ಅಗರು, ಲವಂಗ, ಚಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆಗೊಳಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು