Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:23 - ಕನ್ನಡ ಸಮಕಾಲಿಕ ಅನುವಾದ

23 “ ‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹಾರಾನ್ ಕನ್ನೆ, ಏದೆನ್ ಸ್ಥಳಗಳವರು ಹಾಗೂ ಶೆಬ, ಅಸ್ಸೀರಿಯಾ, ಕಿಲ್ಮದ್ ಪ್ರಾಂತ್ಯಗಳ ವರ್ತಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹಾರಾನ್ ಕನ್ನೆ ಎದೆನ್ ಸ್ಥಳಗಳವರೂ ಶೆಬ ಅಶ್ಶೂರ್‍ಕಿಲ್ಮದ್ ಪ್ರಾಂತಗಳ ವರ್ತಕರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮತ್ತು ಹಾರಾನ್‌ಕನ್ನೆ, ಎದೆನ್, ಶೆಬದ ವ್ಯಾಪಾರಿಗಳು, ಅಶ್ಶೂರ್ ಮತ್ತು ಕಿಲ್ಮದ್ ಊರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:23
22 ತಿಳಿವುಗಳ ಹೋಲಿಕೆ  

ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?


ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?


ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.


ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.


“ಅದರಂತೆ ಅಬ್ರಹಾಮನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ಬಂದು ನೆಲೆಸಿದನು. ಅವನ ತಂದೆಯ ಮರಣದ ನಂತರ ನೀವು ಈಗ ವಾಸಿಸುತ್ತಿರುವ ಈ ನಾಡಿಗೆ ದೇವರು ಅವನನ್ನು ಬರಮಾಡಿದರು.


ಕಲ್ನೇ ಪಟ್ಟಣಕ್ಕೆ ಹೋಗಿ ನೋಡಿರಿ. ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ಹೋಗಿರಿ. ಅಲ್ಲಿಂದ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ನಿಮ್ಮ ಎರಡು ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?


ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?


ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.


ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು.


ಅಸ್ಸೀರಿಯರು ಎಲ್ಲರೂ ಅವರಲ್ಲಿ ಕೂಡಿಕೊಂಡಿರುವರು; ಅವರು ಲೋಟನ ಸಂತತಿಯವರಿಗೆ ಸಹಾಯಮಾಡಲು ಸಿದ್ಧರಾಗಿದ್ದಾರೆ.


ಶೆಬದವರು ಅವುಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಸೇವಕರನ್ನು ಸಹ ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಆದರೂ ಅಸ್ಸೀರಿಯರು ನಿನ್ನನ್ನು ಸೆರೆಹಿಡಿಯುವಷ್ಟರಲ್ಲೇ ನೀವು ಕೇನ್ಯರೂ ಹಾಳಾಗುವರು.”


ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು.


ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು. ದೆದಾನನ ಪುತ್ರರು ಅಶ್ಯೂರರು, ಲೆಟೂಶ್ಯರೂ, ಲೆಯುಮ್ಯರೂ.


ಆದ್ದರಿಂದ ಯೆಹೋವ ದೇವರು ತನಗೆ ಹೇಳಿದ ಪ್ರಕಾರ, ಅಬ್ರಾಮನು ಹೊರಟುಹೋದನು. ಲೋಟನು ಅವನೊಂದಿಗೆ ಹೋದನು. ಅಬ್ರಾಮನು ಹಾರಾನಿನಿಂದ ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.


ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.


ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.


ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಎಂದರೆ ಸುಂದರವಾದ ಬಟ್ಟೆಗಳು, ನೀಲಿಬಟ್ಟೆಗಳು, ಕಸೂತಿಯ ಕೆಲಸ ಮತ್ತು ಹಗ್ಗಗಳಿಂದ ಬಲವಾಗಿ ಬಿಗಿದ ಬಣ್ಣಬಣ್ಣದ ವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಕಳುಹಿಸುತ್ತಿದ್ದರು.


“ಅಲ್ಲಿ ಅಸ್ಸೀರಿಯ ಮತ್ತು ಅದರ ಎಲ್ಲಾ ಗುಂಪು ಇರುವುದು. ಅಸ್ಸೀರಿಯದ ಸುತ್ತಲೂ ಖಡ್ಗದಿಂದ ಹತರಾದವರ ಸಮಾಧಿಗಳಿರುವುವು;


ಶೆಬ, ದೆದಾನ್ ಮತ್ತು ತಾರ್ಷೀಷಿನ ವರ್ತಕರು, ಅವಳ ಎಲ್ಲಾ ಹಳ್ಳಿಗಳೊಂದಿಗೆ ಅಲ್ಲಿ ನಿನಗೆ, “ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದೆಯಾ? ಕೊಳ್ಳೆ ಹೊಡೆಯುವುದಕ್ಕಾಗಿಯೇ ನಿನ್ನ ತಂಡವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ಪಶುಗಳನ್ನೂ ಸಂಪತ್ತನ್ನೂ ತೆಗೆದುಕೊಂಡು ಮಹಾ ಸುಲಿಗೆ ತೆಗೆದುಕೊಳ್ಳಬೇಕೆಂದೋ?” ಎನ್ನುವರು.’


ಓಬಾಲ್, ಅಬೀಮಯೇಲ್, ಶೆಬಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು