Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:32 - ಕನ್ನಡ ಸಮಕಾಲಿಕ ಅನುವಾದ

32 ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕಗೀತೆಯನ್ನೆತ್ತಿ ಹೀಗೆ ಪ್ರಲಾಪಿಸುವರು; “ಸಮುದ್ರದ ನಡುವೆ ಹಾಳಾಗಿರುವ ಟೈರ್‌ನಂಥ ಪಟ್ಟಣ ಯಾವುದು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು, ‘ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ರೋಧಿಸುವರು, ಪ್ರಲಾಪಿಸುವರು, ಹಾಡುವರು ಶೋಕಗೀತೆಯನ್ನು; ಕಡಲ ನಡುವೆ ಬಿಕೋ ಎನ್ನುವ ಟೈರನ್ನು ಏತಕೆ ಹೋಲಿಸೋಣ? ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ರೋದನಮಾಡುತ್ತಾ ನಿನ್ನ ವಿಷಯವಾಗಿ ಶೋಕಗೀತವನೆತ್ತಿ ಹೀಗೆ ಪ್ರಲಾಪಿಸುವರು - ಸಮುದ್ರದ ನಡುವೆ ಬಿಕೋ ಎನ್ನುವ ತೂರಿಗೆ ಯಾವದು ಸಮಾನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “‘ಅಳುತ್ತಾ ನಿನಗೆ ಈ ಶೋಕಗೀತೆಯನ್ನು ಹಾಡುವರು: “‘ತೂರಿನಂತೆ ಯಾರಿಲ್ಲ. ಆದರೆ ತೂರ್ ಹಾಳಾಗಿಹೋಯಿತು, ಸಮುದ್ರ ಮಧ್ಯದಲ್ಲಿ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:32
9 ತಿಳಿವುಗಳ ಹೋಲಿಕೆ  

ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: “ ‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, ಸಮುದ್ರದ ಮೇಲೆ ಬಲಗೊಂಡ ನಗರವೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದೆ?


ಆಕೆಯ ದಹನದ ಹೊಗೆಯನ್ನು ನೋಡಿ, ‘ಈ ಮಹಾಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಕೂಗುವರು.


“ಮನುಷ್ಯಪುತ್ರನೇ, ಈಗ ಟೈರಿನ ಬಗ್ಗೆ ನೀನು ಗೋಳಾಟವನ್ನೆತ್ತು;


ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ. ಪೂರ್ವದಿಕ್ಕಿನ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.


ಯೆರೂಸಲೇಮಿನ ಪುತ್ರಿಯೇ, ನಾನು ಯಾವುದನ್ನು ನಿನಗೆ ಸಾಕ್ಷಿಯನ್ನಾಗಿಡಲಿ? ಯಾವುದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಕನ್ಯೆಯೇ, ನಿನ್ನನ್ನು ಆದರಿಸುವವರು ಯಾರು?


ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ.


ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು.


“ಮನುಷ್ಯಪುತ್ರನೇ, ಟೈರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಸರ್ವಸುಲಕ್ಷಣ ಶಿರೋಮಣಿ. ಸಂಪೂರ್ಣಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು