ಯೆಹೆಜ್ಕೇಲನು 27:33 - ಕನ್ನಡ ಸಮಕಾಲಿಕ ಅನುವಾದ33 ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ. ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಿಪಡಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅಪಾರ ಐಶ್ವರ್ಯದಿಂದ, ವಾಣಿಜ್ಯ ದಿನಸುಗಳಿಂದ ನೀನು ತುಂಬಿಸಿದೆ ಬಹುರಾಷ್ಟ್ರಗಳನು, ಸಮೃದ್ಧಿಗೊಳಿಸಿದೆ ಭೂರಾಜರನು. ಈಗಾಗಿವೆ ಸಮುದ್ರದ ಪಾಲು ಆ ಸರಕು ಸಾಮಗ್ರಿಗಳೆಲ್ಲವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಿನ್ನ ಸರಕುಗಳು ಸಮುದ್ರಗಳನ್ನು ಹಾದು ಹರಡಿಕೊಂಡವು. ಅವುಗಳಿಂದ ಬಹುಜನಾಂಗಗಳನ್ನು ತುಂಬಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಿನ್ನ ವ್ಯಾಪಾರಿಗಳು ಸಮುದ್ರದಾಚೆ ಹೋದರು; ನೀನು ಅನೇಕರನ್ನು ತೃಪ್ತಿಗೊಳಿಸಿದಿ. ನಿನ್ನ ಐಶ್ವರ್ಯದಿಂದಲೂ ನೀನು ಮಾರಿದ ಸರಕುಗಳಿಂದಲೂ ನೀನು ಲೋಕದ ರಾಜರನ್ನು ಐಶ್ವರ್ಯವಂತರನ್ನಾಗಿ ಮಾಡಿದಿ. ಅಧ್ಯಾಯವನ್ನು ನೋಡಿ |