Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:7 - ಕನ್ನಡ ಸಮಕಾಲಿಕ ಅನುವಾದ

7 ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು ಮತ್ತು ಅದು ನಿನ್ನ ಧ್ವಜವಾಗಿತ್ತು. ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ಹಾಯಿ ನಿನಗೆ ಧ್ವಜವಾಗಲೆಂದೆ ಮಾಡಿಹರು ಈಜಿಪ್ಟಿನ ಕಸೂತಿಯ ನಾರುಮಡಿಯಿಂದ. ನಿನ್ನ ಮೇಲ್ಕಟ್ಟು ಚಿತ್ರಿತವಾಗಿದೆ ಎಲೀಷ ಕರಾವಳಿಯ ಊದಾ ಕಡುಗೆಂಪುಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಹಾಯಿಯು ನಿನಗೆ ಧ್ವಜವೂ ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟು ಎಲೀಷಕರಾವಳಿಯ ಧೂಮ್ರರಕ್ತವರ್ಣಗಳಿಂದ ಚಿತ್ರಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಜಿಪ್ಟಿನಲ್ಲಿ ತಯಾರಿಸಿದ ಬಣ್ಣದ ನಾರುಮಡಿಯನ್ನು ನಿನ್ನ ಹಾಯಿಗಳಿಗಾಗಿ ಉಪಯೋಗಿಸಿದರು. ಆ ಹಾಯಿಯು ನಿನ್ನ ಧ್ವಜವಾಯಿತು. ನಿನ್ನ ಮೇಲ್ಮಾಳಿಗೆಯ ಹೊದಿಕೆಯು ನೀಲ ಮತ್ತು ಧೂಮ್ರ ವರ್ಣದವುಗಳಾಗಿದ್ದವು. ಅವು ಸೈಪ್ರಸ್ ದ್ವೀಪದಿಂದ ಬಂದವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:7
8 ತಿಳಿವುಗಳ ಹೋಲಿಕೆ  

ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.


ನೀಲಿ, ಧೂಮ್ರ, ರಕ್ತವರ್ಣದಾರಗಳು, ನಾರುಬಟ್ಟೆಗಳು, ಮೇಕೆಯ ಕೂದಲು,


ನಯವಾದ ನಾರಿನ ಕೆಲಸದವರು ಬಟ್ಟೆ ನೇಯುವವರು ನಿರಾಶರಾಗಿರುವರು.


ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.


ಈಜಿಪ್ಟಿನ ನಯವಾದ ನಾರು ಮಡಿಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.


ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.


ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಕುವೆಯಿಂದಲೂ ಕುದುರೆಗಳು ಬರುತ್ತಿದ್ದವು. ಅರಸನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.


ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು