Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:8 - ಕನ್ನಡ ಸಮಕಾಲಿಕ ಅನುವಾದ

8 ಸೀದೋನಿನ ಮತ್ತು ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವವರಾಗಿದ್ದಾರೆ. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನಗೆ ಹುಟ್ಟುಹಾಕುವರು ಸಿದೋನಿನವರು, ಅರ್ವಾದಿನವರು. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಚೀದೋನಿನವರೂ ಅರ್ವಾದಿನವರೂ ನಿನಗೆ ಹುಟ್ಟುಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಚೀದೋನ್ ಮತ್ತು ಅರ್ವಾದಿನ ಜನರು ನಿನ್ನ ಹಡಗುಗಳಿಗೆ ಹುಟ್ಟುಹಾಕುವವರಾಗಿದ್ದರು. ತೂರೇ, ನಿನ್ನ ಜ್ಞಾನಿಗಳು ಹಡಗುಗಳನ್ನು ನಡಿಸುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:8
13 ತಿಳಿವುಗಳ ಹೋಲಿಕೆ  

ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.


ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರ ಸಂಗಡ ಆ ಹಡಗುಗಳಲ್ಲಿ ಕಳುಹಿಸಿದನು.


ಅರ್ವಾದಿನವರು ಮತ್ತು ಹೆಲೆಕರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಇದ್ದರು. ಗಮ್ಮಾದ್ಯರು ನಿನ್ನ ಗೋಪುರಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.


ನಿನ್ನ ನಾವಿಕರ ಕೂಗಾಟಕ್ಕೆ, ಸಮುದ್ರತೀರದ ಪ್ರದೇಶಗಳು ನಡುಗುವುವು.


ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.


ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?


“ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು.


ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು.


“ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು, ಅವನಿಗೆ ಹಡಗುಗಳು ಸೇರುವ ರೇವೂ ಇರುವುದು. ಅವನ ಮೇರೆಯು ಸೀದೋನಿಗೆ ಮುಟ್ಟುವುದು.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತನು ಹುಟ್ಟಿದನು.


ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು.


“ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು