Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:13 - ಕನ್ನಡ ಸಮಕಾಲಿಕ ಅನುವಾದ

13 ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:13
25 ತಿಳಿವುಗಳ ಹೋಲಿಕೆ  

ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.


“ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.


ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


“ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.


ಯೆಹೋವ ದೇವರು ಅದರ ಮೇಲೆ ತರುವಂಥ ನೇಮಿಸಿದ ದಂಡವು ಹಾದು ಹೋಗುವಲ್ಲೆಲ್ಲಾ ಅದು ದಮ್ಮಡಿ, ಕಿನ್ನರಿಗಳ ಸಂಗಡ ಇರುವುದು. ಆತನು ಅವರೊಂದಿಗೆ ಯುದ್ಧಗಳಲ್ಲಿ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು.


“ಮರೆತುಹೋದ ವೇಶ್ಯೆಯೇ, ಕಿನ್ನರಿಯನ್ನು ತೆಗೆದುಕೋ. ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು.”


ನಿನ್ನ ವೈಭವವೂ, ನಿನ್ನ ವೀಣೆಗಳ ಸ್ವರವೂ ಸಮಾಧಿಗೆ ಇಳಿದಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ.


ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


“ ‘ಶೆಬದವರು, ರಾಮದವರು ನಿನ್ನ ಕಡೆಯ ವರ್ತಕರಾಗಿ ಎಲ್ಲಾ ಶ್ರೇಷ್ಠವಾದ ಸುಗಂಧ ದ್ರವ್ಯದಿಂದಲೂ ಎಲ್ಲಾ ಬೆಲೆಯುಳ್ಳ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.


ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.


“ ‘ಖಡ್ಗವನ್ನು ಒರೆಗೆ ಸೇರಿಸು, ನೀನು ಸೃಷ್ಟಿಯಾದ ಸ್ಥಳದಲ್ಲಿಯೇ ನಿನ್ನ ಪೂರ್ವಜರ ನಾಡಿನಲ್ಲಿಯೇ ನಿನಗೆ ನ್ಯಾಯತೀರಿಸುವೆನು.


ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.


ಅವುಗಳ ಮುಂದೆ ಬೆಂಕಿ ದಹಿಸುತ್ತದೆ. ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ. ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ. ಅವುಗಳ ಹಿಂದೆ ಕಾಡು ಹಾಳಾಗಿದೆ. ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.


ದಮ್ಮಡಿಗಳ ಉತ್ಸಾಹವು ಮುಗಿದಿದೆ. ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.


ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ. ನಾನೇ ನಿನ್ನನ್ನು ನೇಮಿಸಿದ್ದೇನೆ. ನೀನು ದೇವರ ಪರಿಶುದ್ಧ ಪರ್ವತದ ಮೇಲೆ ಇದ್ದೆ; ನೀನು ಉರಿಯುತ್ತಿರುವ ಕಲ್ಲುಗಳ ನಡುವೆ ನಡೆದೆ.


ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ; ಶುದ್ಧ ಬಂಗಾರದಿಂದಲೂ ಜ್ಞಾನವನ್ನು ಕೊಂಡುಕೊಳ್ಳಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು