Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:16 - ಕನ್ನಡ ಸಮಕಾಲಿಕ ಅನುವಾದ

16 ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರವು ತುಂಬಿ ನೀನು ಪಾಪಿಯಾದೆ; ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. ಓ ರಕ್ಷಕ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀ ಪಾಪಿಯಾದೆ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರಗಳು ತುಂಬಿಕೊಂಡದ್ದರಿಂದ. ಎಂದೇ, ಹೊಲಸೆಂಬಂತೆ ನಿನ್ನ ತಳ್ಳಿಬಿಟ್ಟೆ ದೇವರ ಬೆಟ್ಟದಿಂದ ಕಿತ್ತೆಸೆದುಬಿಟ್ಟೆ ಕೆಂಡದ ನಡು ಮಡುವಿನ ನೆಲೆಯಿಂದ ನೆರಳು ನೀಡುವ ಕೆರೂಬಿಯೇ ಎಸೆಯಿತು ನಿನ್ನನ್ನು ಅಲ್ಲಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ವಿುತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಹೊಲಸನ್ನಾಗಿ ತಳ್ಳಿಬಿಟ್ಟೆನು; ಹೌದು. ನೆರಳುಕೊಡುವ ಕೆರೂಬಿಯೇ, ಕೆಂಡದ ಮಳೆಯ ಮಧ್ಯದಲ್ಲಿನ ನಿನ್ನ ನೆಲೆಯಿಂದ ನಾನು ನಿನ್ನನ್ನು ಕಿತ್ತು ಧ್ವಂಸಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:16
23 ತಿಳಿವುಗಳ ಹೋಲಿಕೆ  

ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ.


ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ.


ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.


ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ.


ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು.


ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.


ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.


ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.


ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”


ಅವನು ವ್ಯಾಪಾರಿಯಾಗಿದ್ದು, ಅವನ ಕೈಯಲ್ಲಿ ಮೋಸದ ತಕ್ಕಡಿ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅವನ ದುರಾಶೆ.


ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ. ನಾನೇ ನಿನ್ನನ್ನು ನೇಮಿಸಿದ್ದೇನೆ. ನೀನು ದೇವರ ಪರಿಶುದ್ಧ ಪರ್ವತದ ಮೇಲೆ ಇದ್ದೆ; ನೀನು ಉರಿಯುತ್ತಿರುವ ಕಲ್ಲುಗಳ ನಡುವೆ ನಡೆದೆ.


ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.


ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.


ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು