Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:2 - ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:2
40 ತಿಳಿವುಗಳ ಹೋಲಿಕೆ  

ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;


ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.


ಯೆಹೋವ ದೇವರೇ, ಅವರನ್ನು ಭಯದಲ್ಲಿರಿಸಿರಿ; ರಾಷ್ಟ್ರಗಳು ತಾವು ಮನುಷ್ಯರೇ ಎಂದು ತಿಳಿದುಕೊಳ್ಳಲಿ.


ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಅವನು ಹೊಸದಾಗಿ ವಿಶ್ವಾಸಕ್ಕೆ ಬಂದವನಾಗಿರಬಾರದು. ಅಂಥವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಬಲಿಬೀಳುವನು.


ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ. ಆದರೆ ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು.


ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.


ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.


ಆದರೆ ಅವನು ಬಲ ಹೊಂದಿದ ಮೇಲೆ ಅವನ ಗರ್ವವು ನಾಶಕ್ಕೆ ನಡೆಸಿತು. ಅವನು ಧೂಪಪೀಠದ ಮೇಲೆ ಧೂಪಸುಡುವುದಕ್ಕೂ, ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದನು.


ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.


ನೀವು ಇದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯುವುವು, ನೀವು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿತವರಾಗಿ ದೇವರ ಹಾಗೆ ಇರುವಿರಿ. ಇದು ದೇವರಿಗೆ ತಿಳಿದಿದೆ,” ಎಂದು ಹೇಳಿತು.


ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.


ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.


ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರಾದ ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ಟೈರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?


“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ. ‘ನಾನು ವಿಧವೆಯಾಗಿ ಕೂತುಕೊಳ್ಳುವುದಿಲ್ಲ. ಪುತ್ರ ಶೋಕವನ್ನು ಅನುಭವಿಸುವುದಿಲ್ಲ,’ ಎನ್ನುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.


“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.


ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: “ ‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, ಸಮುದ್ರದ ಮೇಲೆ ಬಲಗೊಂಡ ನಗರವೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದೆ?


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


“ನಿಶ್ಚಿಂತೆಯಾಗಿ ವಾಸಿಸಿದಂಥ ಉಲ್ಲಾಸದ ಪಟ್ಟಣ ನಾನೇ ಹೊರತು ಮತ್ತೊಂದಿಲ್ಲಾ,” ಎಂದು ತನ್ನೊಳಗೆ ಎಂದುಕೊಂಡಂಥ ಸುಭದ್ರ ನಿನೆವೆ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದರಲ್ಲಿ ಹಾದುಹೋಗುವವರೆಲ್ಲರೂ ನಿಂದಿಸಿ ಅಪಹಾಸ್ಯ ಮಾಡುವರು.


ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ.


ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


ನೀನು, “ಆ ನೈಲ್ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು,” ಹೇಳಿಕೊಂಡದ್ದರಿಂದ, “ ‘ಈಜಿಪ್ಟ್ ದೇಶವು ಹಾಳು ಮರುಭೂಮಿಯಾಗುವುದು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.


ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.


ಅವನು ತನ್ನ ಪಿತೃಗಳ ದೇವರನ್ನಾಗಲೀ, ಸ್ತ್ರೀಯರಿಂದ ಅಪೇಕ್ಷಿಸಿದವರನ್ನಾಗಲೀ ಅವನು ಲಕ್ಷಿಸುವುದಿಲ್ಲ, ಯಾವ ದೇವರನ್ನೂ ಲಕ್ಷಿಸುವುದಿಲ್ಲ; ಆದರೆ ಅವನು ಎಲ್ಲವುಗಳಿಗಿಂತ ಹೆಚ್ಚಿ, ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.


ಆಗ, ನಿನ್ನನ್ನು ಮತ್ತು ಅವನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಈ ಮನುಷ್ಯನಿಗೆ ಸ್ಥಳಕೊಡು,’ ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು