Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:25 - ಕನ್ನಡ ಸಮಕಾಲಿಕ ಅನುವಾದ

25 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಜನಾಂಗಗಳಲ್ಲಿ ಚದುರಿಹೋಗಿರುವ ಇಸ್ರಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: “ಬೇರೆ ದೇಶಗಳಿಗೆ ನಾನು ಇಸ್ರೇಲರನ್ನು ಚದರಿಸಿದೆನು. ಆದರೆ ತಿರುಗಿ ಇಸ್ರೇಲರನ್ನೆಲ್ಲಾ ಒಟ್ಟುಗೂಡಿಸುವೆನು. ಆಗ ಆ ದೇಶದವರು ನಾನು ಪವಿತ್ರವಾದ ದೇವರೆಂದು ತಿಳಿದು ಆ ರೀತಿಯಾಗಿ ನನ್ನನ್ನು ನೋಡುವರು. ಆಗ ಇಸ್ರೇಲರು ತಮ್ಮ ದೇಶದಲ್ಲಿ ವಾಸಮಾಡುವರು. ಆ ದೇಶವನ್ನು ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:25
33 ತಿಳಿವುಗಳ ಹೋಲಿಕೆ  

ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿಸುವಿರಿ; ನೀವು ನನ್ನ ಜನರಾಗಿರುವಿರಿ. ನಾನು ನಿಮ್ಮ ದೇವರಾಗಿರುವೆನು.


“ಆದ್ದರಿಂದ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಶ್ಚಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ, ನೀವು ಚದರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ. ಇಸ್ರಾಯೇಲ್ ದೇಶವನ್ನು ನಿಮಗೆ ತಿರುಗಿ ಕೊಡುವೆನು.’


ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”


ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.


ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು.


ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.” ’ ”


“ಇಗೋ, ಎಲ್ಲಿ ಅವರನ್ನು ಮಾರಿದಿರೋ, ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ, ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿತೀರಿಸುವೆನು.


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ತಮ್ಮ ನಾಚಿಕೆಯನ್ನು ಮರೆತುಬಿಡುವರು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.


ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.


ನಾನು ಒಳ್ಳೆಯ ಮೇವಿನಲ್ಲಿ ಅವುಗಳನ್ನು ಮೇಯಿಸುವೆನು. ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಮಂದೆಯು ಇರುವುದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವುವು.


ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ಕಣಿವೆಯನ್ನೇ, ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಅಲ್ಲಿ ಅವಳು ತಾನು ಯೌವನದ ದಿವಸಗಳಲ್ಲಿಯೂ, ಈಜಿಪ್ಟ್ ದೇಶದೊಳಗಿಂದ ಹೊರಟು ಬಂದ ದಿವಸಗಳಲ್ಲಿಯೂ ಆದ ಹಾಗೆ ಆಡುವಳು.


ಈಜಿಪ್ಟಿನಿಂದ ಪಕ್ಷಿಯಗಳಂತೆಯೂ ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. ನಾನು ಅವರ ಮನೆಗಳಲ್ಲಿ ಇರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು