Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:3 - ಕನ್ನಡ ಸಮಕಾಲಿಕ ಅನುವಾದ

3 ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಇಗೋ, ನೀನು ದಾನಿಯೇಲನಿಗಿಂತಲೂ ಜ್ಞಾನಿಯಾಗಿರುವೆಯಾ; ನಿನಗೆ ರಹಸ್ಯವಾದುದು ಯಾವುದೇ ಇದ್ದರು ನಿನಗೆ ಮರೆಯಾಗಿರುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಗೋ, ನೀನು ದಾನಿಯೇಲನಿಗಿಂತಲೂ ಬುದ್ಧಿವಂತನು; ನಿನಗೆ ಮರೆಯಾದ ಮರ್ಮವು ಯಾವದೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ದಾನಿಯೇಲನಿಗಿಂತ ಜಾಣನು ಎಂಬುದಾಗಿ ಭಾವಿಸುತ್ತಿ. ಎಲ್ಲಾ ರಹಸ್ಯಗಳು ನನಗೆ ಗೊತ್ತು ಎಂದು ನೀನು ನೆನಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:3
16 ತಿಳಿವುಗಳ ಹೋಲಿಕೆ  

ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.


ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


ನೀನು ದೇವರ ಆಲೋಚನಾ ಸಭೆಯಲ್ಲಿ ಸದಸ್ಯನೋ? ಜ್ಞಾನವು ನಿನಗೆ ಮಾತ್ರ ಮೀಸಲೋ?


ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವುಗಳಲ್ಲಿ ಅರಸನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.


ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.


ಇವರಲ್ಲಿ ಯೆಹೂದದಿಂದ ದಾನಿಯೇಲ, ಹನನ್ಯ, ಮೀಶಾಯೇಲ್, ಅಜರ್ಯ ಎಂಬವರಿದ್ದರು.


ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.


“ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು