Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:5 - ಕನ್ನಡ ಸಮಕಾಲಿಕ ಅನುವಾದ

5 ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ ನಿನ್ನ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯ ಗರ್ವಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ನಿನ್ನ ಅಧಿಕಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರಲು ನಿನ್ನ ಮನಸ್ಸು ನಿನ್ನ ಆಸ್ತಿಯ ನಿವಿುತ್ತ ಉಬ್ಬಿಕೊಂಡಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶ್ವರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶ್ವರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:5
32 ತಿಳಿವುಗಳ ಹೋಲಿಕೆ  

ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.


“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!”


ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು. ಅವರು ತೃಪ್ತರಾದಾಗ, ಅಹಂಕಾರಿಗಳಾದರು, ಅನಂತರ ಅವರು ನನ್ನನ್ನು ಮರೆತುಬಿಟ್ಟರು.


“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು ತಮ್ಮ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳು ಆಗಿರುವವರಿಗೆ ಕಷ್ಟ!


ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.


ಟೈರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು, ಬೆಳ್ಳಿಯನ್ನು ಧೂಳಿನಂತೆಯೂ, ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.


ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರಾದ ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ಟೈರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?


ಪ್ರವಾಹದಿಂದ ಶೀಹೋರಿನ ಧಾನ್ಯವೂ, ನೈಲ್ ನದಿಯ ಸುಗ್ಗಿಯೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.


ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.


ನೀನು ಎದೋಮ್ಯರನ್ನು ಸೋಲಿಸಿ ಕೀರ್ತಿಯನ್ನು ಪಡೆದುಕೊಂಡೆನಲ್ಲಾ ಎಂದು ನಿನ್ನ ಹೃದಯವು ಗರ್ವಪಡದಿರಲಿ. ಈಗ ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದನು.


ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?


ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.


ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಗರ್ವಪಡುತ್ತಿರುವೆ, ನಿನ್ನ ಜಯದಲ್ಲಿ ಘನಪಡುತ್ತಾ, ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದು ಹೇಳಿ ಕಳುಹಿಸಿದನು.


ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.


ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.


ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು