ಯೆಹೆಜ್ಕೇಲನು 29:12 - ಕನ್ನಡ ಸಮಕಾಲಿಕ ಅನುವಾದ12 ನಾನು ಈಜಿಪ್ಟ್ ದೇಶವನ್ನು ಹಾಳುಬಿದ್ದಿರುವ ದೇಶಗಳಲ್ಲಿ ಸೇರಿಸುವೆನು. ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ನಡುವೆ ನಲವತ್ತು ವರ್ಷಗಳು ಹಾಳಾಗಿರುವುವು. ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದುರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹಾಳುಬಿದ್ದಿರುವ ದೇಶಗಳೊಳಗೆ ಈಜಿಪ್ಟ್ ದೇಶವನ್ನೂ ಹಾಳು ಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲವತ್ತು ವರ್ಷ ಹಾಗೆಯೇ ಇರುವುವು; ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸ, ದೇಶವಿದೇಶಗಳಿಗೆ ತೂರಿಬಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹಾಳುಬಿದ್ದಿರುವ ದೇಶಗಳೊಳಗೆ ಐಗುಪ್ತದೇಶವನ್ನೂ ಹಾಳುಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಾಲ್ವತ್ತು ವರುಷ ಹಾಗೆಯೇ ಇರುವವು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಈಜಿಪ್ಟನ್ನು ನಾಶಮಾಡುತ್ತೇನೆ. ಅದರ ನಗರಗಳು ನಲವತ್ತು ವರ್ಷಗಳ ತನಕ ನಿರ್ಜನವಾಗಿರುವದು. ಈಜಿಪ್ಟ್ ಜನರನ್ನು ಬೇರೆ ದೇಶಗಳಿಗೆ ಅಟ್ಟಿಬಿಡುವೆನು. ಪರದೇಶಗಳಲ್ಲಿ ಅವರು ಪ್ರವಾಸಿಗಳಂತಿರುವರು.” ಅಧ್ಯಾಯವನ್ನು ನೋಡಿ |