Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:15 - ಕನ್ನಡ ಸಮಕಾಲಿಕ ಅನುವಾದ

15 ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ರಾಜ್ಯ ಸಮಸ್ತ ರಾಜ್ಯಗಳಲ್ಲಿ ಕನಿಷ್ಟವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಆ ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣಗತಿಗೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ರಾಜ್ಯವು ಸಮಸ್ತರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವದು; ವಿುಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಗತಿಗೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದು ಯಾವ ಮಹತ್ವವೂ ಇಲ್ಲದ ರಾಜ್ಯವಾಗಿರುವುದು. ಬೇರೆ ರಾಜ್ಯಗಳಿಗಿಂತ ಅದು ಎಂದಿಗೂ ಉನ್ನತಸ್ಥಾನದಲ್ಲಿರದು. ಅದು ಅಷ್ಟು ಚಿಕ್ಕ ರಾಜ್ಯವಾಗುವುದರಿಂದ ಬೇರೆ ದೇಶಗಳ ಮೇಲೆ ಅಧಿಕಾರ ನಡೆಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:15
9 ತಿಳಿವುಗಳ ಹೋಲಿಕೆ  

ಅವರು ಕಷ್ಟವೆಂಬ ಕಡಲನ್ನು ದಾಟುವರು. ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು. ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು. ಅಸ್ಸೀರಿಯದ ಗರ್ವವು ತಗ್ಗಿಹೋಗುವುದು. ಈಜಿಪ್ಟಿನ ರಾಜದಂಡವು ಗತಿಸುವುದು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು.


“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.


“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನೊಂದಿಗೂ ಮತ್ತು ಅವನ ಸಮೂಹದೊಂದಿಗೂ ಮಾತನಾಡಿ, “ ‘ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನವಾಗಿರುವೆ?


ಆ ರಾಜ್ಯವು ಮೇಲೇಳದ ಹಾಗಿದ್ದರೂ, ಅವನು ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.


ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು.


ಆದರೆ ಜನರು ಸಂಖ್ಯೆಯಲ್ಲಿ ಕಡಿಮೆಯಾಗಿ ಚಿಂತೆ ಸಂಕಟದಿಂದ ಕುಗ್ಗಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು