Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:19 - ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುವೆನು; ಅವನು ಅದರ ಜನ ಯಾವತ್ತನ್ನು ಒಯ್ದು ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಂಬಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ರಾಜನಾದ ನೆಬೂಕದ್ನೆಚ್ಚರನಿಗೆ ನಾನು ಈಜಿಪ್ಟ್ ದೇಶವನ್ನು ಕೊಡುವೆನು. ನೆಬೂಕದ್ನೆಚ್ಚರನು ಈಜಿಪ್ಟಿನವರನ್ನು ಸೆರೆಹಿಡಿದು ಕೊಂಡೊಯ್ವನು. ಈಜಿಪ್ಟಿನ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚುವನು. ಇದು ಅವನ ಸೈನಿಕರ ಸಂಬಳವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:19
12 ತಿಳಿವುಗಳ ಹೋಲಿಕೆ  

“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಬಾಬಿಲೋನಿನ ಅರಸನ ಖಡ್ಗವು ನಿನ್ನ ವಿರುದ್ಧ ಬರುವುದು.


ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು. ಕೂಷ್ ಪಟ್ಟಣವು ಸಂಕಟಪಡುವುದು. ಈಜಿಪ್ಟಿನಲ್ಲಿ ಕೊಲ್ಲಲಾದವರು ಬಿದ್ದಾಗ, ಅವಳ ಸಂಪತ್ತು ಸೂರೆಯಾಗುವುದು. ಅವಳ ಅಡಿಪಾಯಗಳು ಕಿತ್ತುಹೋಗುವವು.


ಈಜಿಪ್ಟಿನವರನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನಾಳುವನು, ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅದು ಜನಾಂಗಗಳಿಗೆ ಕೊಳ್ಳೆಯಾಗಿರುವುದು,


ನಾನು ಪತ್ರೋಸನ್ನು ನಾಶಮಾಡಿ, ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. ತೆಬೆಸ್ ಪಟ್ಟಣವನ್ನು ದಂಡಿಸುವೆನು.


“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನೊಂದಿಗೂ ಮತ್ತು ಅವನ ಸಮೂಹದೊಂದಿಗೂ ಮಾತನಾಡಿ, “ ‘ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನವಾಗಿರುವೆ?


ನಾನು ಈಜಿಪ್ಟ್ ದೇಶವನ್ನು ಹಾಳು ಮಾಡಿ ಅದರ ಸೊತ್ತನ್ನೆಲ್ಲಾ ಧ್ವಂಸಮಾಡಿ ಅದರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿಯುವುದು.’


ನಾನು ಸುಲಿಗೆಯನ್ನು ಮತ್ತು ಕೊಳ್ಳೆಯನ್ನು ತೆಗೆದುಕೊಳ್ಳುವೆನು. ಹೀಗೆ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳನ್ನು ಎದುರಿಸುವೆನು. ಜನಾಂಗಗಳಿಂದ ಒಟ್ಟುಗೂಡಿ, ಪಶುಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಿಸುವವರ ಮೇಲೆಯೂ ಕೈಹಾಕುವೆನು,” ಎಂದು ಹೇಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು