Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:3 - ಕನ್ನಡ ಸಮಕಾಲಿಕ ಅನುವಾದ

3 ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:3
25 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.


ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರುವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ, ಹಾಗೆಯೇ ಈಜಿಪ್ಟಿನ ಅರಸನಾದ ಫರೋಹ ಹೋಫ್ರನನ್ನು ಅವನ ಪ್ರಾಣವನ್ನು ಹುಡುಕುವ ಅವನ ಶತ್ರುಗಳ ಕೈಯಲ್ಲಿ ಒಪ್ಪಿಸುತ್ತೇನೆ.’ ”


ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.


ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.


“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.


ನೀವು ಭಯಭಕ್ತಿಗೆ ಪಾತ್ರರು, ನೀವು ಒಂದು ಸಾರಿ ಬೇಸರಗೊಂಡರೆ, ನಿಮ್ಮ ಮುಂದೆ ನಿಲ್ಲುವವನ್ಯಾರು?


ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.


ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು.


ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು.


ಜನರು ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟಿದ್ದರಿಂದ, ಆ ಘಟಸರ್ಪನನ್ನು ಆರಾಧಿಸಿದರು. ಇದಲ್ಲದೆ ಆ ಮೃಗವನ್ನೂ ಆರಾಧಿಸಿ, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದರು.


ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ ಕರುಗಳ ಮಧ್ಯದಲ್ಲಿರುವ ಹೋರಿಗಳ ಹಾಗೆಯೂ ಇರುವ ಜನಾಂಗವನ್ನು ಗದರಿಸಿರಿ. ಮೃಗದಂಥವರು ತಗ್ಗಿಸಿಕೊಂಡು ಬೆಳ್ಳಿ ಗಟ್ಟಿಗಳನ್ನು ನಿಮಗೆ ತರಲಿ. ಆದರೆ ಯುದ್ಧದಲ್ಲಿ ಆನಂದಿಸುವ ರಾಷ್ಟ್ರಗಳನ್ನು ಚದರಿಸಿರಿ.


ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ವಿದೇಶಿಯರ ಕೈಯಿಂದ ನಾಶಮಾಡಿಸುವೆನು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಏನೂ ಇಲ್ಲದಿದ್ದರಲ್ಲಿ ಸಂತೋಷ ಪಡುವವರೇ, ನೀವು ಹೆಚ್ಚಳ ಪಡುವುದು ಶೂನ್ಯವಾಗಿರುವುದರಲ್ಲಿಯೇ? “ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿಲ್ಲವೇ?” ಅಂದುಕೊಳ್ಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು