ಯೆಹೆಜ್ಕೇಲನು 29:9 - ಕನ್ನಡ ಸಮಕಾಲಿಕ ಅನುವಾದ9 ನೀನು, “ಆ ನೈಲ್ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು,” ಹೇಳಿಕೊಂಡದ್ದರಿಂದ, “ ‘ಈಜಿಪ್ಟ್ ದೇಶವು ಹಾಳು ಮರುಭೂಮಿಯಾಗುವುದು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಫರೋಹನು, - ‘ಈ ನದಿ ನನ್ನದೇ, ನಾನೇ ಮಾಡಿಕೊಂಡೆ’ ಎಂದುಕೊಂಡನು. ಈ ಕಾರಣ ಈಜಿಪ್ಟ್ ದೇಶ ಹಾಳುಪಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಫರೋಹನು - ಈ ನದಿಯು ನನ್ನದೇ, ನಾನೇ ಮಾಡಿಕೊಂಡದು ಅಂದುಕೊಂಡ ಕಾರಣ ಐಗುಪ್ತದೇಶವು ಹಾಳುಪಾಳಾಗುವದು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈಜಿಪ್ಟ್ ನಿಶ್ಯೇಷವಾಗಿ ನಾಶವಾಗುವದು. ಆಗ ಅವರು ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.” ದೇವರು ಹೀಗೆಂದನು, “ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ. ಯಾಕೆಂದರೆ ನೀನು, ‘ಇದು ನನ್ನ ನದಿ, ಇದನ್ನು ನಾನು ಮಾಡಿದೆನು’ ಎಂದು ಹೇಳಿದೆ. ಅಧ್ಯಾಯವನ್ನು ನೋಡಿ |