ಯೆಹೆಜ್ಕೇಲನು 3:19 - ಕನ್ನಡ ಸಮಕಾಲಿಕ ಅನುವಾದ19 ಆದರೆ ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ, ದುರ್ಮಾರ್ಗವನ್ನೂ ಬಿಟ್ಟು ತಿರುಗಿಕೊಳ್ಳದೆ ಹೋದರೆ, ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀನು ಆ ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧಕ್ಕಾಗಿ ಸಾಯುವನು; ನೀನಾದರೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಒಂದುವೇಳೆ ನೀನು ಒಬ್ಬ ದುಷ್ಟಮನುಷ್ಯನನ್ನು ಎಚ್ಚರಿಸಿ ಅವನು ಪಾಪ ಮಾಡದಂತೆ ಮತ್ತು ಅವನ ಜೀವಿತವನ್ನು ಬದಲಾವಣೆ ಮಾಡಲು ಹೇಳಿದ್ದಲ್ಲಿ ಆ ಮನುಷ್ಯನು ನಿನ್ನ ಮಾತುಗಳನ್ನು ಕೇಳಲು ನಿರಾಕರಿಸಿದರೆ, ಅವನು ಪಾಪ ಮಾಡುವುದರಿಂದ ಸಾಯುವನು. ಆದರೆ ನೀನು ನಿನ್ನ ಜೀವವನ್ನು ರಕ್ಷಿಸಿಕೊಳ್ಳುವಿ. ಅಧ್ಯಾಯವನ್ನು ನೋಡಿ |