Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:23 - ಕನ್ನಡ ಸಮಕಾಲಿಕ ಅನುವಾದ

23 ಆಮೇಲೆ ನಾನು ಎದ್ದು ಬಯಲುಸೀಮೆಯ ಕಡೆಗೆ ಹೋದೆನು. ಯೆಹೋವ ದೇವರ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ನಾನು ಅಡ್ಡ ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾನೆದ್ದು ಬೈಲುಸೀಮೆಗೆ ಹೊರಟುಹೋದಾಗ ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತದರ್ಶನವು ಆದಂತೆ ಆಹಾ, ಅಲ್ಲಿಯೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನೆದ್ದು ಬಯಲು ಸೀಮೆಗೆ ಹೋದೆನು. ಕೆಬಾರ್ ನದಿಯ ಪಕ್ಕದಲ್ಲಿ ನಾನು ಕಂಡ ಮಹಿಮೆಯಂತಿದ್ದ ಯೆಹೋವನ ಮಹಿಮೆಯು ಅಲ್ಲಿ ಇತ್ತು. ನಾನು ನನ್ನ ಮುಖವನ್ನು ನೆಲಕ್ಕೆ ತಾಗಿಸಿ ಬಗ್ಗಿ ನಮಸ್ಕರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:23
18 ತಿಳಿವುಗಳ ಹೋಲಿಕೆ  

ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.


ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು.


ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,


ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು.


ಆಗ ಯೆಹೋವ ದೇವರ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ, ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು. ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಯೆಹೋವ ದೇವರು ಕೂಗಿ ಅವನಿಗೆ,


ಜನರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ, ಅವರು ದೇವದರ್ಶನ ಗುಡಾರದ ಕಡೆಗೆ ನೋಡಲಾಗಿ, ಮೇಘವು ಅದನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ಕಾಣಬಂತು.


ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು.


ಇಸ್ರಾಯೇಲಿನ ದೇವರ ಮಹಿಮೆಯು, ನಾನು ಆ ಬಯಲುಸೀಮೆಯಲ್ಲಿ ನೋಡಿದ ಆಕಾರದ ಪ್ರಕಾರವೇ ಅಲ್ಲಿ ಇತ್ತು.


ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.


ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು.


ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು. ನಾನು ನೋಡಿದೆ ಯೆಹೋವ ದೇವರ ಮಹಿಮೆಯು ಯೆಹೋವ ದೇವರ ಆಲಯವನ್ನು ತುಂಬಿಕೊಂಡಿತು, ನಾನು ಬೋರಲು ಬಿದ್ದೆನು.


ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು