Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:25 - ಕನ್ನಡ ಸಮಕಾಲಿಕ ಅನುವಾದ

25 ಮನುಷ್ಯಪುತ್ರನೇ, ಇಗೋ, ಅವರು ನಿನ್ನನ್ನು ಹಗ್ಗಗಳಿಂದ ಕಟ್ಟುವರು. ನೀನು ಅವರಿಂದ ಹೊರಗೆ ಹೋಗಲು ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನರಪುತ್ರನೇ, ಇಗೋ, ನಿನ್ನ ಸ್ವಜನರು ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಹೊರಗೆ ಸಂಚರಿಸಲು ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನರಪುತ್ರನೇ, ಇಗೋ, ನಿನ್ನ ಸ್ವಜನರೇ ನಿನ್ನನ್ನು ಕಟ್ಟಿ ಬಂಧಿಸುವರು. ನೀನು ಅವರ ಮಧ್ಯೆ ಅತ್ತಿತ್ತ ಸಂಚರಿಸದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನರಪುತ್ರನೇ, ಇಗೋ, [ನಿನ್ನ ಸ್ವಜನರು] ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಅವರಲ್ಲಿ ಆಚೀಚೆ ಸಂಚರಿಸದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನರಪುತ್ರನೇ, ನಿನ್ನ ಸ್ವಜನರು ಹಗ್ಗ ಹಿಡಿದುಕೊಂಡು ಬಂದು ನಿನ್ನನ್ನು ಕಟ್ಟುವರು. ನಿನ್ನನ್ನು ಜನರ ಮಧ್ಯದಿಂದ ಹೊರಹೋಗದಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:25
7 ತಿಳಿವುಗಳ ಹೋಲಿಕೆ  

ನಾನು ನಿನ್ನ ಮೇಲೆ ಹಗ್ಗಗಳನ್ನು ಇಡುತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿಯುವವರೆಗೂ, ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.


ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ.


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.


ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು.


ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸ ಪಡಲೂ ಇಲ್ಲ; ನೀವು ನನ್ನ ಮೇಲೆ ಕೈ ಇಟ್ಟಿದ್ದರಿಂದ ಒಂಟಿಗನಾಗಿ ಕೂತುಕೊಂಡೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು