Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:26 - ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ನಾನು ನಿನ್ನ ನಾಲಿಗೆ ಸೇದಿ ಹೋಗುವಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವವನಾಗಲಾರೆ. ಅವರು ತಿರುಗಿಬೀಳುವ ಜನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ ನಿನ್ನ ನಾಲಿಗೆಯು ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸದಿರುವಿ; ಅವರು ದ್ರೋಹಿವಂಶದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿನ್ನ ನಾಲಿಗೆಯು ಸೇದಿ ಹೋಗುವಂತೆ ಮಾಡುವೆನು. ನಿನಗೆ ಮಾತನಾಡಲು ಆಗದು. ಆದ್ದರಿಂದ ಅವರನ್ನು ಖಂಡಿಸಲು ಯಾರೂ ಇರುವದಿಲ್ಲ. ಯಾಕೆಂದರೆ ಆ ಜನರು ಯಾವಾಗಲೂ ನನ್ನ ವಿರುದ್ಧವಾಗಿ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:26
18 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ, ಆಗ ನಾನೇ ಯೆಹೋವ ದೇವರೆಂದು ತಿಳಿಯುವರು.”


ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದಿದ್ದರೆ, ಯೆರೂಸಲೇಮನ್ನು ನನ್ನ ಎಲ್ಲಾ ಸಂತೋಷಕ್ಕಿಂತಲೂ ಹೆಚ್ಚಾಗಿಡದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.


ಕರ್ತಾ, ನನ್ನ ತುಟಿಗಳನ್ನು ತೆರೆಯಿರಿ. ಆಗ ನನ್ನ ಬಾಯಿ ನಿಮ್ಮ ಸ್ತೋತ್ರವನ್ನು ಪ್ರಸಿದ್ಧಿ ಮಾಡುವುದು.


ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.


ಎಫ್ರಾಯೀಮನು ವಿಗ್ರಹಗಳಿಗೆ ಸೇರಿಕೊಂಡಿದ್ದಾನೆ. ಅವನನ್ನು ಅವನಷ್ಟಕ್ಕೆ ಬಿಟ್ಟುಬಿಡು.


ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.


“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಆಗ ಅವನು ತಪ್ಪಿಸಿಕೊಂಡು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಯೆಹೋವ ದೇವರ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲಾಗಿತ್ತು. ನನ್ನ ಬಾಯಿ ತೆರೆದಿತ್ತು. ನಾನು ಮೌನವಾಗಿರಲಿಲ್ಲ.


ಅವನು ನನಗೆ ಈ ಮಾತುಗಳನ್ನು ಹೇಳುತ್ತಿದ್ದಾಗ, ನಾನು ನನ್ನ ಮುಖವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.


“ಆದರೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವರನ್ನು ಖಂಡಿಸದಿರಲಿ. ಏಕೆಂದರೆ ನಿಮ್ಮ ಜನರೆಲ್ಲರೂ ಯಾಜಕನೊಂದಿಗೆ ವಾದಿಸುವವರಾಗಿದ್ದಾರೆ.


“ಮನುಷ್ಯಪುತ್ರನೇ, ನೀನು ತಿರುಗಿಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವ, ಅವರಿಗೆ ನೋಡುವುದಕ್ಕೆ ಕಣ್ಣುಗಳುಂಟು, ಆದರೆ ನೋಡುವುದಿಲ್ಲ; ಕೇಳುವುದಕ್ಕೆ ಕಿವಿಗಳುಂಟು, ಕೇಳುವುದಿಲ್ಲ. ಅವರು ತಿರುಗಿಬೀಳುವ ಮನೆತನದವರು.


“ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು