Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:17 - ಕನ್ನಡ ಸಮಕಾಲಿಕ ಅನುವಾದ

17 ಓನಿನ ಮತ್ತು ಪಿಬೇಸೆತಿನ ಯೌವನಸ್ಥರು ಖಡ್ಗದಿಂದ ಸಾಯುವರು. ಈ ಪಟ್ಟಣಗಳ ನಿವಾಸಿಗಳು ತಾವಾಗಿಯೇ ಸೆರೆಯಾಗಿ ಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಓನಿನ ಮತ್ತು ಪೀಬೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒನ್ ಮತ್ತು ಪೀಬೆಸೆತಿನ ಯುವಕರು ಯುದ್ಧದಲ್ಲಿ ಹತರಾಗುವರು. ಆ ನಗರದ ಜನರು ಹಿಡಿಯಲ್ಪಟ್ಟು ಒಯ್ಯಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:17
6 ತಿಳಿವುಗಳ ಹೋಲಿಕೆ  

ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.


ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು.


ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು. ತೆಬೆಸವು ಬಿರುಗಾಳಿಯಿಂದ ತೆಗೆದುಕೊಳ್ಳಲಾಗುವುದು, ನೋಫಿನ ಮೇಲೆ ನಿರಂತರವಾಗಿ ಇಕ್ಕಟ್ಟು ಇರುವುದು.


ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.


ಇದಲ್ಲದೆ ಈಜಿಪ್ಟಿನ ದೇಶದಲ್ಲಿರುವ ಸೂರ್ಯ ದೇವಾಲಯವನ್ನು ಒಡೆದುಹಾಕಿ, ಈಜಿಪ್ಟ್ ದೇವರುಗಳ ಆಲಯಗಳನ್ನು ಬೆಂಕಿಯಿಂದ ಸುಡುವನು.’ ”


ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು