ಯೆಹೆಜ್ಕೇಲನು 30:18 - ಕನ್ನಡ ಸಮಕಾಲಿಕ ಅನುವಾದ18 ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈಜಿಪ್ಟ್ ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವುದು. ಕಾರ್ಮುಗಿಲು ಅದನ್ನು ಆವರಿಸುವುದು. ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವದು, ಕಾರ್ಮುಗಿಲು ಅದನ್ನು ಆವರಿಸುವದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಧಿಕಾರಕ್ಕೆ ಅಂತ್ಯ ಬರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು. ಅಧ್ಯಾಯವನ್ನು ನೋಡಿ |