ಯೆಹೆಜ್ಕೇಲನು 30:22 - ಕನ್ನಡ ಸಮಕಾಲಿಕ ಅನುವಾದ22 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದುದರಿಂದ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧವಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವುದನ್ನೂ, ಮುರಿದದ್ದನ್ನೂ ತೀರಾ ಮುರಿದು ಬಿಟ್ಟು, ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈಜಿಪ್ಟಿನ ಅರಸ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿ ಇರುವುದನ್ನೂ, ಮುರಿದದ್ದನ್ನೂ ಪೂರ್ತಿಯಾಗಿ ಮುರಿದುಬಿಟ್ಟು, ಖಡ್ಗವು ಅವನ ಕೈಯೊಳಗಿನಿಂದ ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಐಗುಪ್ತದ ಅರಸನಾದ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿರುವದನ್ನೂ, ಮುರಿದದನ್ನೂ ತೀರಾ ಮುರಿದುಬಿಟ್ಟು ಖಡ್ಗವು ಅವನ ಕೈಯೊಳಗಿಂದ ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನ್ನೂ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನ್ನೊಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |