Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:24 - ಕನ್ನಡ ಸಮಕಾಲಿಕ ಅನುವಾದ

24 ಬಾಬಿಲೋನಿನ ಅರಸನ ತೋಳುಗಳನ್ನು ನಾನು ಬಲಪಡಿಸುವೆನು, ಅವನ ಕೈಯಲ್ಲಿ ನನ್ನ ಖಡ್ಗವನ್ನಿಡುವೆನು. ಫರೋಹನ ತೋಳುಗಳು ಬಿದ್ದು ಹೋಗುವುವು. ಇವನು ಅವನ ಮುಂದೆ ಗಾಯ ಹೊಂದಿದವನಂತೆ ನರಳಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು, ಗಾಯದಿಂದ ಪ್ರಾಣ ಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸಿ, ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು, ಫರೋಹನ ಕೈಗಳನ್ನು ಮುರಿಸುವಾಗ ಗಾಯದಿಂದ ಪ್ರಾಣಸಂಕಟ ಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು ಗಾಯದಿಂದ ಪ್ರಾಣಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಾಬಿಲೋನಿನ ರಾಜನ ಕೈಗಳನ್ನು ನಾನು ಬಲಪಡಿಸುವೆನು. ನನ್ನ ಖಡ್ಗವನ್ನು ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನ್ನು ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಬ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಬ್ದವು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:24
21 ತಿಳಿವುಗಳ ಹೋಲಿಕೆ  

ಕೂಷ್ ದೇಶದವರೇ, ನೀವೂ ಸಹ ನನ್ನ ಖಡ್ಗದಿಂದ ಹತರಾಗುವಿರಿ.


ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುತ್ತೇನೆ, ಆದರೆ ಫರೋಹನ ಕೈಗಳು ಬಲಹೀನವಾಗುವುವು. ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನ ಕೈಗೆ ಕೊಡುವೆನು. ಅವನು ಅದನ್ನು ಈಜಿಪ್ಟಿನ ವಿರೋಧವಾಗಿ ಪ್ರಯೋಗಿಸುವನು. ಆಗ ಅವರು ನಾನೇ ಯೆಹೋವ ದೇವರು ಎಂದು ತಿಳಿದುಕೊಳ್ಳುವರು.


ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.


“ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.


ಹೀಗೆ, “ಅವರ ಕೈಗಳು ಬಲಹೀನವಾಗುವುವು. ಕೆಲಸವು ಪೂರ್ತಿಯಾಗುವುದಿಲ್ಲ,” ಎಂದುಕೊಂಡು ಅವರೆಲ್ಲರು ನಮ್ಮನ್ನು ಭಯಪಡಿಸಿದರು. ನಾನಾದರೋ, “ದೇವರೇ, ನನ್ನ ಕೈಗಳನ್ನು ಬಲಪಡಿಸಿರಿ,” ಎಂದು ಪ್ರಾರ್ಥಿಸಿದೆನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ : “ ‘ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಜನಸಮೂಹವನ್ನು ಕೊನೆಗಾಣಿಸುವೆನು.


“ಸಾರ್ವಭೌಮ ಯೆಹೋವ ದೇವರು ಟೈರಿಗೆ ಹೀಗೆ ಹೇಳುತ್ತಾರೆ: ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ಸಮುದ್ರತೀರದ ಪ್ರದೇಶಗಳು ನಡುಗುವುದಿಲ್ಲವೇ?


“ಇಗೋ, ಅಂಥ ದಿನಗಳು ಬರುತ್ತವೆ,” ಎಂದು ಯೆಹೋವ ದೇವರು ಹೇಳುತ್ತಾರೆ, “ಅದು ನಾನು ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ಗಾಯಪಟ್ಟವರು ನರಳಾಡುವರು.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ.


ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ, ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.


ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.


ಯೆಹೋವ ದೇವರೇ, ಎದ್ದು ಅವರನ್ನು ಎದುರಿಸಿ ಕೆಳಗೆ ಕೆಡವಿಬಿಡಿರಿ; ನಿಮ್ಮ ಖಡ್ಗದ ಮೂಲಕ ನನ್ನನ್ನು ದುಷ್ಟರಿಂದ ಕಾಪಾಡಿರಿ.


ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು.


ಆ ದೇಶವನ್ನು ನಾಶಪಡಿಸುವುದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು. ಅವರು ಈಜಿಪ್ಟಿಗೆ ವಿರೋಧವಾಗಿ ಖಡ್ಗ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.


“ಮನುಷ್ಯಪುತ್ರನೇ, ನಾನು ಈಜಿಪ್ಟಿನ ಅರಸನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ. ಇಗೋ, ಆ ದೇಶವನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು