Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:3 - ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಿನವು ಹತ್ತಿರವಾಯಿತು; ಹೌದು, ಯೆಹೋವನ ದಿನ, ಕಾರ್ಮುಗಿಲಿನ ದಿನ ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯ ತೀರಿಸತಕ್ಕ ಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:3
35 ತಿಳಿವುಗಳ ಹೋಲಿಕೆ  

“ಯೆಹೋವ ದೇವರ ದಿವಸವು ಎಲ್ಲಾ ಜನಾಂಗಗಳ ಮೇಲೆ ಸಮೀಪವಾಗಿದೆ. ನೀನು ಮಾಡಿದ ಹಾಗೆಯೇ ನಿನಗೂ ಮಾಡಲಾಗುವುದು. ನಿನ್ನ ಕಾರ್ಯಗಳು ನಿನ್ನ ತಲೆಯ ಮೇಲೆ ತಿರುಗುವುವು.


ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.


ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.


ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.


ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.


ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.


ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.


ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.


ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.


ಏಕೆಂದರೆ, ಅವರ ಕೋಪಾಗ್ನಿಯ ಮಹಾದಿನವು ಬಂದಿದೆ, ಅದರ ಮುಂದೆ ಯಾರು ನಿಂತಾರು?” ಎಂದು ಹೇಳಿದರು.


ಪ್ರಿಯರೇ, ನೀವು ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿರಿ. ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾರೆ.


ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.


ಅದೇ ಪ್ರಕಾರ, ಇವೆಲ್ಲವೂ ಆಗುವುದನ್ನು ನೀವು ಕಾಣುವಾಗ, ಅಂತ್ಯವು ಬಾಗಿಲ ಹತ್ತಿರದಲ್ಲಿಯೇ ಇದೆ ಎಂದು ತಿಳಿದುಕೊಳ್ಳಿರಿ.


ನಾನು ಈಜಿಪ್ಟ್ ದೇಶವನ್ನು ಹಾಳುಬಿದ್ದಿರುವ ದೇಶಗಳಲ್ಲಿ ಸೇರಿಸುವೆನು. ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ನಡುವೆ ನಲವತ್ತು ವರ್ಷಗಳು ಹಾಳಾಗಿರುವುವು. ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದುರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.


“ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.


ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.


ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು.


ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.


ಬೆಳಗಿನ ಜಾವದಲ್ಲಿ ಯೆಹೋವ ದೇವರು ಅಗ್ನಿ ಮೇಘಗಳ ಸ್ತಂಭದೊಳಗಿಂದ ಈಜಿಪ್ಟಿನ ದಂಡಿನ ಮೇಲೆ ದೃಷ್ಟಿಯಿಟ್ಟು, ಈಜಿಪ್ಟಿನ ದಂಡನ್ನು ಗಾಬರಿಗೊಳಿಸಿದರು.


ಅದು ಈಜಿಪ್ಟಿನ ದಂಡಿಗೂ ಇಸ್ರಾಯೇಲರ ದಂಡಿಗೂ ನಡುವೆ ಬಂದಿತು. ಮೇಘಸ್ತಂಭವು ಈಜಿಪ್ಟಿನವರಿಗೆ ಕತ್ತಲನ್ನೂ ಇಸ್ರಾಯೇಲರಿಗೆ ಬೆಳಕನ್ನೂ ನೀಡಿತು. ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಾಗಲಿಲ್ಲ.


ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.


ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ.


ಇಗೋ, ಯೆಹೋವ ದೇವರ ದಿನವು ಬರುತ್ತದೆ. ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.


ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


“ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು