Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:14 - ಕನ್ನಡ ಸಮಕಾಲಿಕ ಅನುವಾದ

14 ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀರಾವರಿಯ ಯಾವ ಮರಗಳೂ ತಮ್ಮ ನೀಳವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದಿರಲೆಂದೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ನಿಗುರಿಕೊಳ್ಳದಿರಲೆಂದೂ ಹೀಗಾಯಿತು; ಅವೆಲ್ಲಾ ಮರಣದ ಪಾಲಾಗುವವು, ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:14
21 ತಿಳಿವುಗಳ ಹೋಲಿಕೆ  

ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.


ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.


ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.


ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ. ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.”


ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ, ನಮ್ಮ ದೇವರು ನಮ್ಮ ಮೇಲೆಯೂ, ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲಿಲ್ಲವೋ? ಆದರೆ ನೀವು ಸಬ್ಬತ್ ದಿನವನ್ನು ಅಪವಿತ್ರ ಮಾಡುವುದರಿಂದ ಇಸ್ರಾಯೇಲಿನ ಮೇಲೆ ಇನ್ನೂ ದೇವರ ಕೋಪವನ್ನು ಬರಮಾಡುವಿರಿ.”


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.


“ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.


ಇಸ್ರಾಯೇಲರೆಲ್ಲಾ ಇದನ್ನು ಕೇಳಿ ಭಯಪಟ್ಟು, ಇನ್ನು ಮೇಲೆ ಕೆಟ್ಟದ್ದನ್ನು ಮಾಡದೆ ಇರುವರು.


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.


“ಅವರು ಏರಿ ಹೋದರೆಂದು,” ಹೇಳಿದ್ದರ ಅರ್ಥವೇನು? ಭೂಮಿಯ ಭೂಗರ್ಭಕ್ಕೂ ಇಳಿದಿದ್ದರು ಎಂದೂ ಹೇಳಿದ ಹಾಗಾಯಿತಲ್ಲವೇ?


ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು.


ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.


ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.


ಅವನು ಹೀಗೆ ಹೇಳಿದನು: “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. ಅವರು ನನ್ನ ಕೂಗನ್ನು ಕೇಳಿದರು. ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, ಆಗ ನನ್ನ ಕರೆಯನ್ನು ನೀವು ಕೇಳಿದಿರಿ.


ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು. ಕೆಳಗಿನ ಭೂಮಿಯು ನನ್ನನ್ನು ಶಾಶ್ವತವಾಗಿ ನಿರ್ಬಂಧಿಸಿತು. ಆದರೂ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನ ಪ್ರಾಣವನ್ನು ತಗ್ಗಿನಿಂದ ಮೇಲಕ್ಕೆ ಎಬ್ಬಿಸಿದ್ದೀರಿ.


ಆದರೆ ಪಾತಾಳದ ಕುಣಿಯ ಕಡೆಗೂ, ಸಮಾಧಿಗೂ ಇಳಿಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು