Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:3 - ಕನ್ನಡ ಸಮಕಾಲಿಕ ಅನುವಾದ

3 ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಬಹಳ ಎತ್ತರವಾಗಿದೆ, ಅದರ ತುದಿಯು ದಟ್ಟವಾದ ಕೊಂಬೆಗಳ ನಡುವೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಹಾ, ತಿಲಕವೋ ದೇವದಾರುವೋ ಒಂದು ವೃಕ್ಷವು ಲೆಬನೋನಿನಲ್ಲಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ, ಅದರ ಎತ್ತರವು ಬಹಳ, ಅದರ ತುದಿಯು ಮೇಘಚುಂಬಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಶ್ಶೂರವು ಲೆಬನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, ಸುಂದರವಾದ ಕೊಂಬೆಗಳಿಂದಲೂ ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. ಅದರ ಮೇಲಿನ ತುದಿಯು ಮುಗಿಲನ್ನು ಮುಟ್ಟುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:3
24 ತಿಳಿವುಗಳ ಹೋಲಿಕೆ  

ಹಾಸಿಗೆಯಲ್ಲಿ ಮಲಗಿದ್ದಾಗ ನಾನು ಕಂಡ ದರ್ಶನಗಳು: ನಾನು ನೋಡಲಾಗಿ ಭೂಮಿಯ ಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು.


“ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.


ತುರಾಯಿ ಗಿಡವೇ, ಗೋಳಾಡು. ಏಕೆಂದರೆ ದೇವದಾರು ಬಿದ್ದುಹೋಯಿತು. ಭವ್ಯವಾದ ಮರಗಳು ಹಾಳಾದವು. ಬಾಷಾನಿನ ಅಲ್ಲೋನ್ ಮರಗಳೇ, ಗೋಳಾಡಿರಿ. ದಟ್ಟವಾದ ಅಡವಿಯು ಕಡಿಯಲಾಗಿದೆ.


ಅವರು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ, ಅಸ್ಸೀರಿಯರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಮರುಭೂಮಿಯಂತೆ ಒಣಗಿದ್ದಾಗಿಯೂ ಮಾಡುವರು.


ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು.


ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು.


ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು. ಅದರ ರೆಂಬೆಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮ ಕೊಟ್ಟವು. ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.


ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.


ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.


ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅಸ್ಸೀರಿನ ಅರಸನನ್ನು ಶಿಕ್ಷಿಸಿದ ಹಾಗೆ ಬಾಬಿಲೋನಿನ ಅರಸನನ್ನೂ, ಅವನ ದೇಶವನ್ನೂ ಶಿಕ್ಷಿಸುತ್ತೇನೆ.


ಆಳುವವರ ರಾಜದಂಡಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ. ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ. ಹಾಗೆಯೇ ಅದು ಬಹು ಕೊಂಬೆಗಳ ಮಧ್ಯದಲ್ಲಿ ಎತ್ತರವಾಗಿ ಕಾಣಬರುತ್ತಿದೆ.


ಆದ್ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರಗಳಿಗಿಂತ ಎತ್ತರವಾಗಿತ್ತು. ಅದು ಹಬ್ಬಿದ್ದುದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.


ದೇವರ ತೋಟದ ದೇವದಾರುಗಳು ಅದನ್ನು ಮರೆಮಾಡಲಿಲ್ಲ. ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ. ಆಲದ ಮರಗಳು ಅದರ ರೆಂಬೆಗಳಷ್ಟೂ ಇಲ್ಲ. ಆ ದೇವರ ತೋಟದ ಯಾವುದೇ ಮರವು ಇದರ ಸೌಂದರ್ಯಕ್ಕೆ ಸಮವಾಗಿಲ್ಲ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು.


ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.


“ಅಲ್ಲಿ ಅಸ್ಸೀರಿಯ ಮತ್ತು ಅದರ ಎಲ್ಲಾ ಗುಂಪು ಇರುವುದು. ಅಸ್ಸೀರಿಯದ ಸುತ್ತಲೂ ಖಡ್ಗದಿಂದ ಹತರಾದವರ ಸಮಾಧಿಗಳಿರುವುವು;


ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.


ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು