ಯೆಹೆಜ್ಕೇಲನು 31:5 - ಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರಗಳಿಗಿಂತ ಎತ್ತರವಾಗಿತ್ತು. ಅದು ಹಬ್ಬಿದ್ದುದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದುದರಿಂದ ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಎತ್ತರವಾಗಿತ್ತು; ಅದರ ಕೊಂಬೆಗಳು ಹಬ್ಬಿದ್ದುದರಿಂದ ಮತ್ತು ಹೆಚ್ಚಿನ ನೀರಾವರಿಯಿದ್ದ ಕಾರಣ ಅದರ ಕೊಂಬೆಗಳು ಅಧಿಕವಾದವು. ಕೊಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗಿರಲು ಆ ವೃಕ್ಷವು ಅಡವಿಯ ಎಲ್ಲಾ ಮರಗಳಿಗಿಂತಲೂ ಅತ್ಯುನ್ನತವಾಗಿತ್ತು; ಅದರ ಕೊಂಬೆಗಳು ನಿಬಿಡವಾಗಿದ್ದವು; ಅಲ್ಲಿ ನೀರಾವರಿಯಿದ್ದ ಕಾರಣ ಅದರ ರೆಂಬೆಗಳು ಉದ್ದವಾಗಿ ಚಾಚಿಕೊಂಡಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಕೆಂದರೆ ಈ ಮರವು ಬೇರೆ ಮರಗಳಿಗಿಂತ ಉನ್ನತವಾಗಿ ಕಾಣಿಸಿಕೊಳ್ಳಲು, ಅದು ಅನೇಕ ಕೊಂಬೆಗಳನ್ನು ಬಿಟ್ಟಿತು. ಅಲ್ಲಿ ಬೇಕಾದಷ್ಟು ನೀರು ಇದ್ದುದರಿಂದ ಕೊಂಬೆಗಳು ಉದ್ದವಾಗಿಯೂ ವಿಶಾಲವಾಗಿಯೂ ಬೆಳೆದವು. ಅಧ್ಯಾಯವನ್ನು ನೋಡಿ |