ಯೆಹೆಜ್ಕೇಲನು 32:10 - ಕನ್ನಡ ಸಮಕಾಲಿಕ ಅನುವಾದ10 ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ಭಯಭೀತಿಗೊಳ್ಳುವಂತೆ ಮಾಡುವೆನು, ನಾನು ಅವರ ಮುಂದೆ ನನ್ನ ಖಡ್ಗವನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೌದು, ಬಹುರಾಷ್ಟ್ರಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಳಿಸುವಾಗ ಅವರು ನಿನ್ನ ದುರ್ಗತಿಯನ್ನು ನೆನೆಸಿ ಭಯಭ್ರಾಂತರಾಗುವರು; ನಿನ್ನ ಪತನದಿಂದ ಪ್ರತಿಯೊಬ್ಬನು ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವು ನಡುಗುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೌದು, ಬಹುಜನಾಂಗಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಪತನದಿನದಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವೂ ನಡುಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅನೇಕ ಮಂದಿ ನಿನಗೆ ಸಂಭವಿಸಿದ್ದನ್ನು ನೋಡಿ ಚಕಿತರಾಗುವರು. ನಾನು ನಿನ್ನ ಕಡೆಗೆ ಖಡ್ಗ ಬೀಸುವಾಗ ಅವರ ಅರಸರು ಬಹಳ ಭಯಗ್ರಸ್ತರಾಗುವರು; ನೀನು ಬೀಳುವ ದಿವಸದಲ್ಲಿ ಅರಸರು ಹೆದರಿ ನಡುಗುವರು. ಪ್ರತಿಯೊಬ್ಬ ರಾಜನು ತನ್ನ ಜೀವವನ್ನು ಉಳಿಸಿಕೊಳ್ಳಲು ಆತುರಪಡುವನು.” ಅಧ್ಯಾಯವನ್ನು ನೋಡಿ |