Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:13 - ಕನ್ನಡ ಸಮಕಾಲಿಕ ಅನುವಾದ

13 ನಾನು ಆ ಬಹು ಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು. ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಪಾದವಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಬಹು ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಇನ್ನು ಮೇಲೆ ಯಾವ ಮನುಷ್ಯನ ಕಾಲಾಗಲಿ, ಯಾವ ಪಶುವಿನ ಗೊರಸಾಗಲಿ ನೀರಿನಲ್ಲಿ ಹೆಜ್ಜೆಯಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೊಡ್ಡ ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಆ ನೀರನ್ನು ಕಲಕಲು ಇನ್ನು ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಡನು, ಯಾವ ಪಶುವೂ ಅಲ್ಲಿ ಗೊರಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬಹುಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಆ ನೀರನ್ನು ಕಲಕಲಿಕ್ಕೆ ಇನ್ನು ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಡನು, ಯಾವ ಪಶುವೂ ಗೊರಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈಜಿಪ್ಟಿನ ಹೊಳೆಯ ತೀರದಲ್ಲಿ ಅನೇಕ ಪ್ರಾಣಿಗಳಿವೆ. ನಾನು ಅವುಗಳನ್ನು ನಾಶಮಾಡುವೆನು. ಜನರು ಹೊಳೆಯ ನೀರನ್ನು ತಮ್ಮ ಕಾಲುಗಳಿಂದ ಕೆಸರಾಗಿ ಇನ್ನು ಮಾಡಲಾರರು. ದನಗಳ ಗೊರಸುಗಳು ನೀರನ್ನು ಕೆಸರನ್ನಾಗಿ ಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:13
6 ತಿಳಿವುಗಳ ಹೋಲಿಕೆ  

ಯಾವ ಮನುಷ್ಯನ ಪಾದವಾದರೂ ಅದರಲ್ಲಿ ಹಾದು ಹೋಗುವುದಿಲ್ಲ. ಮೃಗಗಳ ಪಾದವೂ ಅದರಲ್ಲಿ ಹಾದು ಹೋಗುವುದಿಲ್ಲ ಅಥವಾ ನಲವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವುದಿಲ್ಲ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.


ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?


“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.


ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ವಿದೇಶಿಯರ ಕೈಯಿಂದ ನಾಶಮಾಡಿಸುವೆನು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.


ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು. ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು