Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:15 - ಕನ್ನಡ ಸಮಕಾಲಿಕ ಅನುವಾದ

15 ನಾನು ಈಜಿಪ್ಟ್ ದೇಶವನ್ನು ಹಾಳು ಮಾಡಿ ಅದರ ಸೊತ್ತನ್ನೆಲ್ಲಾ ಧ್ವಂಸಮಾಡಿ ಅದರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿಯುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ, ಆ ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಜಿಪ್ಟಿನಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ಕರಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ನೀಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಈಜಿಪ್ಟ್ ದೇಶವನ್ನು ನಾನು ಬರಿದುಮಾಡುವೆನು. ಆ ದೇಶವು ಎಲ್ಲವನ್ನು ಕಳೆದುಕೊಳ್ಳುವದು. ಈಜಿಪ್ಟಿನಲ್ಲಿ ವಾಸಿಸುವ ಎಲ್ಲಾ ಜನರನ್ನು ನಾನು ಶಿಕ್ಷಿಸುವೆನು. ಆಗ ನಾನು ಒಡೆಯನಾದ ಯೆಹೋವನು ಎಂದು ತಿಳುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:15
13 ತಿಳಿವುಗಳ ಹೋಲಿಕೆ  

ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.


ನಾನು ಫರೋಹನ ಮೇಲೆಯೂ ಅವನ ರಥಗಳ ಮೇಲೆಯೂ ಅವನ ಕುದುರೆ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಂಡಾಗ, ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.


ನಾನು ಈಜಿಪ್ಟಿನವರನ್ನು ಜನಾಂಗಗಳೊಗೆ ಚದುರಿಸಿ ದೇಶಗಳಲ್ಲಿ ಹರಡಿಸುತ್ತೇನೆ; ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”


ನಾನು ಈಜಿಪ್ಟ್ ದೇಶವನ್ನು ಹಾಳುಬಿದ್ದಿರುವ ದೇಶಗಳಲ್ಲಿ ಸೇರಿಸುವೆನು. ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ನಡುವೆ ನಲವತ್ತು ವರ್ಷಗಳು ಹಾಳಾಗಿರುವುವು. ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದುರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.


ಹೀಗೆ ನಾನು ಈಜಿಪ್ಟನ್ನು ದಂಡಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು. ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು