ಯೆಹೆಜ್ಕೇಲನು 32:2 - ಕನ್ನಡ ಸಮಕಾಲಿಕ ಅನುವಾದ2 “ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕಗೀತವನ್ನೆತ್ತಿ ಅವನಿಗೆ ಹೀಗೆ ನುಡಿ - ನೀನು ಜನಾಂಗಗಳಲ್ಲಿ ಮೃಗರಾಜನೆನಿಸಿಕೊಂಡಿದ್ದಿ; ಇಗೋ ಮಹಾನದಿಯಲ್ಲಿನ ಪೇರ್ಮೊಸಳೆಯಾಗಿಬಿಟ್ಟಿ; ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’” ಅಧ್ಯಾಯವನ್ನು ನೋಡಿ |