Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:21 - ಕನ್ನಡ ಸಮಕಾಲಿಕ ಅನುವಾದ

21 ಸತ್ತವರ ಕ್ಷೇತ್ರದೊಳಗಿಂದ ಪ್ರಬಲ ನಾಯಕರು ಈಜಿಪ್ಟ್ ಮತ್ತು ಅವಳ ಮಿತ್ರರಾಷ್ಟ್ರಗಳ ಬಗ್ಗೆ ಹೇಳುವರು, ‘ಅವರು ಇಳಿದು ಹೋಗಿ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿ ಮಲಗಿದ್ದಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಾತಾಳದೊಳಗಿನ ಬಲಿಷ್ಠ ಶೂರರು ಅದನ್ನೂ, ಅದರ ಸಹಾಯಕರನ್ನೂ ನೋಡಿ, ‘ಇವರು ಸುನ್ನತಿಯಿಲ್ಲದವರಾಗಿಯೂ, ಖಡ್ಗದಿಂದ ಹತರಾದವರಾಗಿಯೂ ಇಳಿದು ಬಂದಿದ್ದಾರೆ’ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪಾತಾಳದಲ್ಲಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ, “ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು’ ಎಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪಾತಾಳದೊಳಗಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಶೂರರು, ಬಲಶಾಲಿಗಳು ಯುದ್ಧದಲ್ಲಿ ಮಡಿದಿದ್ದಾರೆ, ಆ ಪರದೇಶಿಗಳು ಮರಣದ ಸ್ಥಳಕ್ಕೆ ಹೋದರು. ಅವರು ಅಲ್ಲಿದ್ದುಕೊಂಡು ಈಜಿಪ್ಟಿನವರೊಂದಿಗೆ ಮತ್ತು ಅದರ ಸಹಾಯಕರೊಂದಿಗೆ ಮಾತನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:21
11 ತಿಳಿವುಗಳ ಹೋಲಿಕೆ  

ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತಹ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಖಡ್ಗಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ. ಅವರ ಗುರಾಣಿಗಳು ಅವರ ಮೂಳೆಗಳ ಮೇಲೆ ಇಡಲಾದವು. ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರರಾಗಿದ್ದರೂ ಅವರ ಅಕ್ರಮಗಳು ಅವರ ಎಲುಬುಗಳ ಮೇಲೆ ಇರುವುವು.


‘ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.’


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ.


ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು.


“ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು