Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:22 - ಕನ್ನಡ ಸಮಕಾಲಿಕ ಅನುವಾದ

22 “ಅಲ್ಲಿ ಅಸ್ಸೀರಿಯ ಮತ್ತು ಅದರ ಎಲ್ಲಾ ಗುಂಪು ಇರುವುದು. ಅಸ್ಸೀರಿಯದ ಸುತ್ತಲೂ ಖಡ್ಗದಿಂದ ಹತರಾದವರ ಸಮಾಧಿಗಳಿರುವುವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಶ್ಶೂರವೂ ಮತ್ತು ಅದರ ಎಲ್ಲಾ ಗುಂಪು ಅಲ್ಲಿರುತ್ತವೆ. ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಅಸ್ಸೀರಿಯ ಮತ್ತು ಅದರ ಜನತೆ ಯಾವಾಗಲು ಅಲ್ಲಿರುವುವು; ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗಹತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಶ್ಶೂರವೂ ಅದರ ಜನ ಯಾವತ್ತೂ ಅಲ್ಲಿರುತ್ತವೆ; ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗಹತರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22-23 “ಅಶ್ಶೂರವೂ ಅದರ ಎಲ್ಲಾ ಸೈನ್ಯವೂ ಆ ಪಾತಾಳದಲ್ಲಿರುವದು. ಅವರ ಸ್ಥಳವು ಆಳವಾದ ಗುಂಡಿಯಲ್ಲಿರುವದು. ಆ ಅಶ್ಶೂರದ ಸೈನಿಕರೆಲ್ಲಾ ರಣರಂಗದಲ್ಲಿ ಮಡಿದವರೇ. ಅವರ ಸಮಾಧಿಗಳು ಅಶ್ಶೂರದ ಸಮಾಧಿಯ ಸುತ್ತಮುತ್ತ ಇವೆ. ಅವರು ಜೀವಂತರಾಗಿರುವಾಗ ಜನರನ್ನು ಭೀತಿಗೊಳಿಸುತ್ತಿದ್ದರು. ಆದರೆ ಈಗ ಮೌನವಾಗಿದ್ದಾರೆ. ಅವರೆಲ್ಲಾ ಯುದ್ಧದಲ್ಲಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:22
13 ತಿಳಿವುಗಳ ಹೋಲಿಕೆ  

“ಅಲ್ಲಿ ಮೆಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ. ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಸುನ್ನತಿಯಿಲ್ಲದೆ ಖಡ್ಗದಿಂದ ಹತರಾದವರು.


“ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಕಿತ್ತೀಮೆಂಬ ತೀರದಿಂದ ಹಡಗುಗಳು ಬಂದು, ಅಸ್ಸೀರಿಯರನ್ನೂ, ಏಬೆರ್ ಜನರನ್ನೂ ಸೋಲಿಸುವುವು. ಅವನು ಸಹ ಸದಾಕಾಲಕ್ಕೂ ನಾಶವಾಗುವನು.”


“ ‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು.


ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.


ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು