ಯೆಹೆಜ್ಕೇಲನು 32:24 - ಕನ್ನಡ ಸಮಕಾಲಿಕ ಅನುವಾದ24 “ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಏಲಾಮೂ ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿವೆ.ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರವಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಏಲಾಮು ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಧಿಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನ್ನು ಸೇರಿದರು. ಅವರು ಜೀವಿಸಿದ್ದಾಗ ಜನರನ್ನು ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನ್ನು ಸೇರಿದರು. ಅಧ್ಯಾಯವನ್ನು ನೋಡಿ |