Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:30 - ಕನ್ನಡ ಸಮಕಾಲಿಕ ಅನುವಾದ

30 “ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ಉತ್ತರದೇಶದ ಸಕಲ ರಾಜರುಗಳೂ ಸಮಸ್ತ ಸಿದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರರಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು, ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಉತ್ತರದೇಶದ ಸಕಲಪ್ರಭುಗಳೂ ಸಮಸ್ತ ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಉತ್ತರ ದೇಶದ ನಾಯಕರೆಲ್ಲಾ ಅಲ್ಲಿದ್ದಾರೆ. ಚೀದೋನಿನ ಸೈನಿಕರೂ ಅಲ್ಲಿದ್ದಾರೆ. ಅವರ ಬಲವು ಜನರನ್ನು ಭಯಗ್ರಸ್ತರನ್ನಾಗಿ ಮಾಡಿತ್ತು. ಅವರೂ ಈಗ ಯುದ್ಧದಲ್ಲಿ ಮಡಿದ ಇತರರೊಂದಿಗೆ ಬಿದ್ದುಕೊಂಡಿದ್ದಾರೆ. ತಮ್ಮ ನಾಚಿಕೆಯೊಂದಿಗೆ ಪಾತಾಳವನ್ನು ಸೇರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:30
11 ತಿಳಿವುಗಳ ಹೋಲಿಕೆ  

ಗೋಮೆರ್ ಮತ್ತು ಅದರ ಎಲ್ಲಾ ದಳಗಳನ್ನೂ, ಉತ್ತರ ದಿಕ್ಕಿನ ತೋಗರ್ಮದವರನ್ನೂ ಮತ್ತು ಅದರ ಎಲ್ಲಾ ದಳಗಳನ್ನೂ, ಹೀಗೆ ನಿನ್ನ ಸಂಗಡವಿರುವ ಅನೇಕ ಜನರನ್ನೂ ನಿನ್ನೊಂದಿಗೆ ಬರಮಾಡುವೆನು.


ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ ಮುಂದರಿಸಿ ಉತ್ತರ ದಿಕ್ಕಿನ ಕಟ್ಟಕಡೆಯಿಂದ ಬರಮಾಡಿ ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,


ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವೆ. ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದವರಾಗಿ ಬಲವಾದ ಸೈನ್ಯವಾಗಿಯೂ ಮಹಾ ದಂಡಾಗಿಯೂ ಬರುವೆ.


“ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.


ಹತ್ತಿರದಲ್ಲಿಯೂ, ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿರುವ ಉತ್ತರ ದಿಕ್ಕಿನ ಅರಸರೆಲ್ಲರಿಗೂ, ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯಗಳಿಗೂ ಕುಡಿಸಿದೆನು. ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.


ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ,


ಏಕೆಂದರೆ ನಾನು ಉತ್ತರದಲ್ಲಿರುವ ರಾಜ್ಯಗಳ ಕುಲಗಳನ್ನೆಲ್ಲಾ ಕರೆಯುತ್ತೇನೆ. “ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ, ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.


ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.


ನೀನು ವಿದೇಶಿಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ. ಏಕೆಂದರೆ ನಾನೇ ಇದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.’ ”


ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು, ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು, ಆಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿದುಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು