Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:7 - ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 [ಫರೋಹನೇ,] ನಾನು ನಿನ್ನ ಬೆಳಕನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಮಂಕುಮಾಡಿ ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಕಾಣೆಯಾಗುವಂತೆ ನಾನು ಮಾಡುವೆನು. ಆಕಾಶವನ್ನು ಮುಚ್ಚಿ ನಕ್ಷತ್ರಗಳನ್ನು ಹೊಳೆಯದಂತೆ ಮಾಡುವೆನು. ಸೂರ್ಯನನ್ನು ಮೋಡವು ಮುಚ್ಚುವಂತೆ ಮಾಡುವೆನು. ಚಂದ್ರನು ಪ್ರಕಾಶಿಸದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:7
22 ತಿಳಿವುಗಳ ಹೋಲಿಕೆ  

“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.


ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.


ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


ಏಕೆಂದರೆ, ಆಕಾಶದ ನಕ್ಷತ್ರಗಳು ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ.


ಸೂರ್ಯ, ಚಂದ್ರರು ಕಪ್ಪಾಗುವುವು. ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವುವು.


ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು, ಆಗ ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ ಮೂರನೇ ಭಾಗವು ಕತ್ತಲಾಯಿತು. ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ, ಮೂರನೇ ಭಾಗವು ಕತ್ತಲಾಯಿತು. ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಹೋಯಿತು. ರಾತ್ರಿಯು ಹಾಗೆಯೇ ಆಯಿತು.


“ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, “ ‘ಸೂರ್ಯನಿಗೆ ಕತ್ತಲು ಮುಸುಕುವುದು; ಚಂದ್ರನು ಕಾಂತಿಹೀನನಾಗುವನು.


“ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.


ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.


ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು.


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಸೂಚನೆಗಳು ಕಾಣಿಸಿಕೊಳ್ಳುವುವು. ಭೂಮಿಯಲ್ಲಾದರೋ, ಮೊರೆಯುವ ತೆರೆಗಳ ಮತ್ತು ಭೋರ್ಗರೆಯುವ ಸಮುದ್ರದ ನಿಮಿತ್ತ ಜನಾಂಗಗಳು ದಿಕ್ಕುತೋಚದೆ ಸಂಕಟಕ್ಕೆ ಒಳಗಾಗುವರು.


ದೇವರು ಸೂರ್ಯನಿಗೆ ಪ್ರಕಾಶಿಸದಂತೆ ಅಪ್ಪಣೆ ಕೊಟ್ಟರೆ, ಪ್ರಕಾಶಿಸುತ್ತಿರಲಿಲ್ಲ; ನಕ್ಷತ್ರಗಳಿಗೆ ಮುದ್ರೆ ಹಾಕಿದ್ದರೆ, ನಕ್ಷತ್ರವೂ ಮಿನುಗುತ್ತಿರಲಿಲ್ಲ.


ಸೂರ್ಯ ಚಂದ್ರ ನಕ್ಷತ್ರಗಳೂ ನಿನಗೆ ಮೊಬ್ಬಾಗಿ, ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮಾಧಿಗೆ ಇಳಿದ ದಿನದಲ್ಲಿ ನಾನು ಆಳವಾದ ಬುಗ್ಗೆಗಳನ್ನು ದುಃಖದಿಂದ ಮುಚ್ಚಿದೆನು; ನಾನು ಅದರ ಪ್ರವಾಹವನ್ನು ತಡೆಹಿಡಿದೆನು. ಮಹಾಜಲವನ್ನು ನಿಲ್ಲಿಸಿದೆನು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಿಡುವಂತೆ ಮಾಡಿದೆನು. ಬಯಲಿನ ಮರಗಳೆಲ್ಲಾ ಕುಗ್ಗಿಹೋದವು.


ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.


ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು