Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:9 - ಕನ್ನಡ ಸಮಕಾಲಿಕ ಅನುವಾದ

9 ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ವಿನಾಶದ ಸುದ್ದಿಯನ್ನು ಹರಡಿ ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಾನು ನಿನ್ನ ನಾಶದ ಸುದ್ದಿಯನ್ನು, ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ, ಅವರ ಮನಸ್ಸಿನಲ್ಲಿ ಗಲಿಬಿಲಿಯನ್ನು ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನಿನ್ನ ವಿನಾಶದ ಸುದ್ದಿಯನ್ನು, ರಾಷ್ಟ್ರಗಳಲ್ಲಿ ನಿನಗೇ ತಿಳಿಯದ ದೇಶಗಳಿಗೆ ನಾನು ಮುಟ್ಟಿಸುವಾಗ ಆ ದೇಶಗಳು ಕಳವಳಪಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನಿನ್ನ ನಾಶನದ ಸುದ್ದಿಯನ್ನು ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ ಆ ಬಹುಜನಾಂಗಗಳ ಮನಸ್ಸು ಕಳವಳಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಿನ್ನನ್ನು ನಾಶಮಾಡಲು ನಾನು ನಿನ್ನ ಶತ್ರುವನ್ನು ಬರಮಾಡುವಾಗ ಅನೇಕ ಜನರು ದುಃಖಿತರಾಗಿ ಗಲಿಬಿಲಿಗೊಳ್ಳುವರು. ನಿನ್ನನ್ನು ಅರಿಯದ ರಾಜ್ಯದವರೂ ಗಲಿಬಿಲಿಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:9
10 ತಿಳಿವುಗಳ ಹೋಲಿಕೆ  

ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ನಾನು ಈಜಿಪ್ಟಿನವರನ್ನು ಜನಾಂಗಗಳೊಗೆ ಚದುರಿಸಿ ದೇಶಗಳಲ್ಲಿ ಹರಡಿಸುತ್ತೇನೆ; ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”


ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.


ನಾನು ಈಜಿಪ್ಟ್ ದೇಶವನ್ನು ಹಾಳುಬಿದ್ದಿರುವ ದೇಶಗಳಲ್ಲಿ ಸೇರಿಸುವೆನು. ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ನಡುವೆ ನಲವತ್ತು ವರ್ಷಗಳು ಹಾಳಾಗಿರುವುವು. ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದುರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.


ಜನರು ಇದನ್ನು ಕೇಳಿದಾಗ ಭಯಪಡುವರು. ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವುದು.


ಹುಟ್ಟುಹಾಕುವ ಅಂಬಿಗರೆಲ್ಲರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,


ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ಭಯಗೊಳ್ಳುವರು. ನೀನು ಸಂಪೂರ್ಣ ಭೀತಿಗೊಳಗಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’ ”


“ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು