ಯೆಹೆಜ್ಕೇಲನು 33:10 - ಕನ್ನಡ ಸಮಕಾಲಿಕ ಅನುವಾದ10 “ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು: ‘ನೀವು ಹೇಳುತ್ತಿರುವುದು ಇದನ್ನೇ: “ನಮ್ಮ ಅಪರಾಧಗಳೂ ನಮ್ಮ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲೇ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು ಎಂದು ಹೇಳುವಿರಲ್ಲಾ?” ’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರ ನಮ್ಮ ಮೇಲೆ ಬಿದ್ದಿವೆ; ಅವುಗಳಿಂದ ಕ್ಷೀಣವಾಗಿಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಆದ್ದರಿಂದ ನರಪುತ್ರನೇ, ನನ್ನ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನ್ನು ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಆ ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಬೇಕಾದರೆ ಏನು ಮಾಡಬೇಕು?’ ಎಂದು ಅವರು ಕೇಳಿಯಾರು. ಅಧ್ಯಾಯವನ್ನು ನೋಡಿ |