ಯೆಹೆಜ್ಕೇಲನು 33:12 - ಕನ್ನಡ ಸಮಕಾಲಿಕ ಅನುವಾದ12 “ಆದ್ದರಿಂದ, ನರಪುತ್ರನೇ, ನೀನು ನಿನ್ನ ಜನರ ಮಕ್ಕಳಿಗೆ ಹೇಳು: ‘ಒಬ್ಬ ನೀತಿವಂತನು ಅವಿಧೇಯನಾದರೆ, ಆ ವ್ಯಕ್ತಿಯ ಹಿಂದಿನ ನೀತಿಯು ಯಾವುದಕ್ಕೂ ಲೆಕ್ಕವಿಲ್ಲ. ಹಾಗೆಯೇ ದುಷ್ಟನು ಪಶ್ಚಾತ್ತಾಪಪಟ್ಟರೆ, ಆ ವ್ಯಕ್ತಿಯ ಹಿಂದಿನ ದುಷ್ಟತನವು ಖಂಡನೆಯನ್ನು ತರುವುದಿಲ್ಲ. ಪಾಪಮಾಡುವ ನೀತಿವಂತನು ಹಿಂದೆ ನೀತಿವಂತರಾಗಿದ್ದರೂ ಬದುಕಲು ಬಿಡುವುದಿಲ್ಲ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನರಪುತ್ರನೇ, ಜನರಿಗೆ ಹೀಗೆ ಹೇಳು - ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯವು ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪವು ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯವು ಅವನನ್ನು ಉಳಿಸಲಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ‘ಒಬ್ಬನು ಒಳ್ಳೆಯವನಾಗಿದ್ದುಕೊಂಡು ನಂತರ ದುಷ್ಟತನವನ್ನು ನಡಿಸಿದರೆ ಅವನ ಸತ್ಕಾರ್ಯಗಳು ಅವನನ್ನು ರಕ್ಷಿಸಲಾರವು. ಒಬ್ಬನು ದುಷ್ಕೃತ್ಯಗಳನ್ನು ಮಾಡಿ ತನ್ನ ದುಷ್ಟತ್ವದಿಂದ ತಿರುಗಿದರೆ ಅವನು ನಾಶವಾಗುವದಿಲ್ಲ. ಆದ್ದರಿಂದ ಹಿಂದೆ ಮಾಡಿದ್ದ ಪುಣ್ಯಕಾರ್ಯಗಳು ಒಬ್ಬ ಪಾಪಿಯನ್ನು ರಕ್ಷಿಸಲಾರದೆಂಬುದನ್ನು ಜ್ಞಾಪಕದಲ್ಲಿಟ್ಟುಕೊ.’ ಅಧ್ಯಾಯವನ್ನು ನೋಡಿ |